ಮಂಗಳೂರು : ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಮರಣ ವೇದಿಕೆ ಮತ್ತು ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಇವರು ಜಂಟಿಯಾಗಿ ‘ಕುಂಬ್ಳೆ ಸುಂದರ ರಾವ್ ಸಂಸ್ಮರಣೆ’ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 14 ಡಿಸೆಂಬರ್ 2024ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಇವರು ವಹಿಸಲಿದ್ದು, ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕರಾದ ಶ್ರೀ ಭಾಸ್ಕರ ರೈ ಕುಕ್ಕುವಳ್ಳಿ ಇವರು ಸಂಸ್ಮರಣೆ ಭಾಷಣ ಮಾಡಲಿದ್ದಾರೆ. ಇದೇ ವೇದಿಕೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಅರುವ ಕೊರಗಪ್ಪ ಶೆಟ್ಟಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಸುಧನ್ವ ಮೋಕ್ಷ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.