ಬಂಟ್ವಾಳ : ಮಕ್ಕಳ ಕಲಾಲೋಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಇವರು ಕಡೇಶಿವಾಲಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ಧ ಬಂಟ್ವಾಳ ತಾಲೂಕು ಮಕ್ಕಳ 17ನೇ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಲಹರಿ’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 30 ಅಕ್ಟೋಬರ್ 2024ರಂದು ಕಡೇಶಿವಾಲಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದ ಎಸ್. ವಿ. ಎಸ್. ದೇವಳ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಎನ್. ಗಂಗಾಧರ ಆಳ್ವ ಮಾತನಾಡಿ “ಪುಸ್ತಕದ ಒಳನೋಟಗಳನ್ನು ನೋದಿದಾಗ ಇದು ಉತ್ತಮ ಮತ್ತು ಸಂಗ್ರಹಯೋಗ್ಯವಾದ ದಾಖಲೆ.” ಎಂದರು.
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಇದರ ಸಂಚಾಲಕ ಹಾಗೂ ಸ್ಮರಣ ಸಂಚಿಕೆಯ ಗೌರವ ಸಂಪಾದಕರಾದ ತುಕಾರಾಮ ಪೂಜಾರಿ ಮಾತನಾಡಿ ದಾಖಲೆಗಳನ್ನು ಮಾಡಿಡಬೇಕಾದ ಅಗತ್ಯ ಮತ್ತು ಅವುಗಳ ಮಹತ್ವದ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್. ರಾವ್ ಮತ್ತು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಉಪಸ್ಥತರಿದ್ದು ಶುಭ ಕೋರಿದರು. ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾದ ಕೆ. ಕಿಟ್ಟಣ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಡೇಶಿವಾಲಯದ ಸಾಹಿತಿ ವಿಂಧ್ಯಾ ಎಸ್. ರೈ ಕುರುಂಬ್ಲಾಜೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ‘ಲಹರಿ’ಯ ಸಂಪಾದಕ ಮಾಧವ ರೈ ಭಂಡಾರದ ಮನೆ ಸ್ವಾಗತಿಸಿ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಪ್ರೇಮಾ ನಿರೂಪಿಸಿ ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೆ. ವಂದಿಸಿದರು.