ಬದಿಯಡ್ಕ : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ವತಿಯಿಂದ ಶ್ರೀ ಎಂ.ಕೆ. ಜಿನಚಂದ್ರನ್ ದತ್ತಿ ಹಾಗೂ ಶ್ರೀಮತಿ ಕಮಲಮ್ಮ ದತ್ತಿ ‘ಉಪನ್ಯಾಸ ಮತ್ತು ಕವಿ ಕಾವ್ಯ ಸಂವಾದ’ ಕಾರ್ಯಕ್ರಮವನ್ನು ದಿನಾಂಕ 01 ಮಾರ್ಚ್ 2025ರಂದು ಅಪರಾಹ್ನ 2-30 ಗಂಟೆಗೆ ಬದಿಯಡ್ಕದ ಸಂಸ್ಕೃತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಕಾಸರಗೋಡು ಇದರ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶ್ರೀ ಎಂ.ಕೆ. ಜಿನಚಂದ್ರನ್ ದತ್ತಿ ಉಪನ್ಯಾಸದಲ್ಲಿ ಖ್ಯಾತ ವಾಗ್ಮಿ ಶ್ರೀಮತಿ ಆಯಿಶಾ ಪೆರ್ಲ ಇವರು ‘ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ’ ಹಾಗೂ ಶ್ರೀಮತಿ ಕಮಲಮ್ಮ ದತ್ತಿ ಉಪನ್ಯಾಸದಲ್ಲಿ ಪ್ರಾಧ್ಯಾಪಕರಾದ ಡಾ. ಸುಭಾಷ್ ಪಟ್ಟಜೆ ಇವರು ‘ಕನ್ನಡ ಕಥಾ ಸಾಹಿತ್ಯಕ್ಕೆ ಕಾಸರಗೋಡಿನ ಕೊಡುಗೆ’ ಎಂಬ ವಿಷಯಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಬಳಿಕ ಕವಿತಾ ಕೌತುಕ ಸರಣಿ -2ರಲ್ಲಿ ‘ಕವಿ ಕಾವ್ಯ ಸಂವಾದ’ ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.