ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ಮತ್ತು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳ ಗಂಗೋತ್ರಿ ಇದರ ವತಿಯಿಂದ ದಿನಾಂಕ 22ರಿಂದ 24 ಡಿಸೆಂಬರ್ 2025ರಂದು ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂಜೆ 5-30ಗಂಟೆಗೆ ಉಪನ್ಯಾಸ ನಡೆಯಲಿದೆ.
ಪಂಪಾ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಇವರು ಪಂಪ ಕವಿಯ ಆದಿ ಪುರಾಣ ಕಾವ್ಯ ಕುರಿತು ಮೂರು ಉಪನ್ಯಾಸಗಳನ್ನು ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಗಣೇಶ್ ಸಂಜೀವ್ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಇವರ ಗೌರವ ಉಪಸ್ಥಿತಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಪಿ. ಎಲ್. ಧರ್ಮ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜಿತ ಕಾರ್ಯಕ್ರಮ ಇದಾಗಿದ್ದು, ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಎಂಬ ಉದ್ದೇಶದೊಂದಿಗೆ ನಡೆಯುವ ಈ ಮಾಲಿಕೆಯ ಎರಡನೇ ಸಂಚಿಕೆಯ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ವಿಭಾಗದ ಅಧ್ಯಕ್ಷ ಡಾ. ನಾಗಪ್ಪ ಗೌಡ ತಿಳಿಸಿದ್ದಾರೆ.

