ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ ಹಾಗೂ ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರ ಜಂಟಿ ಆಶ್ರಯದಲ್ಲಿ ಅಂಬಲಪಾಡಿ ವ್ಯಾಸ ಬಲ್ಲಾಳ ಜಾನಕಿ ದತ್ತಿನಿಧಿ ಸೇಡಿಯಾಪು ಕೃಷ್ಣ ಭಟ್ ಸಂಸ್ಮರಣೆ ಉಪನ್ಯಾಸ ಕಾರ್ಯಕ್ರಮವು ದಿನಾಂಕ 29 ಅಕ್ಟೋಬರ್ 2024ರಂದು ಅಪರಾಹ್ನ ಘಂಟೆ 2.30 ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೇಂದ್ರೀಯ ವಿಶ್ವವಿದ್ಯಾನಿಲಯ ಪೆರಿಯ ಕಾಸರಗೋಡು ಇಲ್ಲಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರವೀಣ ಪದ್ಯಾಣ ‘ಸೇಡಿಯಾಪು – ವಿಚಾರ ಪ್ರಪಂಚ’ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಹಾಗೂ ಇದೇ ಸಂದರ್ಭದಲ್ಲಿ ವಿಭಾಗದ ವಿದ್ಯಾರ್ಥಿಗಳಿಂದ ಸೇಡಿಯಾಪು ಕವಿತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.
Subscribe to Updates
Get the latest creative news from FooBar about art, design and business.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ಕಾರ್ಯಕ್ರಮ | ಅಕ್ಟೋಬರ್ 29
Previous Articleಬೆಂಗಳೂರಿನಲ್ಲಿ ಕಾವ್ಯಶ್ರೀ ಕನ್ನಡ ಸಾಹಿತ್ಯ ಸಮ್ಮೇಳನ | ನವೆಂಬರ್ 03