ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಘಟಕ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವು 27 ಜುಲೈ2024ರಂದು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ಶೆಟ್ಟಿ ಮಾತನಾಡಿ “ಪ್ರತಿದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದ ಆಗುಹೋಗುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಪರಿಣಾಮಕಾರಿ ಸಂವಹನ ಹಾಗೂ ಶಬ್ದ ಸಂಪತ್ತಿನ ವೃದ್ಧಿ ಸಾಧ್ಯ. ಇಂದಿನ ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ವಿವಿಧ ನವ ಮಾಧ್ಯಮಗಳು ನಕಾರತ್ಮಕ, ಅತಿರಂಜಿತ ಸುದ್ದಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಆದರೆ ಪತ್ರಿಕೆಗಳ ಮೂಲಕ ದೊರೆಯುವ ಸಕಾರಾತ್ಮಕ ಮತ್ತು ಮಹತ್ವಪೂರ್ಣ ದಾಖಲೆಗಳು ಜ್ಞಾನದ ಜೊತೆ ಓದಿನ ಸುಖವನ್ನು ನೀಡುತ್ತವೆ. ವಿದ್ಯಾರ್ಥಿಗಳು ಪತ್ರಿಕೆಗಳಲ್ಲಿ ಪ್ರಕಟವಾಗುವ ಸಂಪಾದಕೀಯ, ಸ್ಥಳೀಯ, ರಾಜ್ಯ ರಾಷ್ಟ್ರ ಮಟ್ಟದ ಸುದ್ದಿಗಳ ಜೊತೆಗೆ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟ ಆಸಕ್ತಿದಾಯಕ ಸಂಗತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.” ಎಂದು ತಿಳಿಸಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ ಕ. ಸಾ. ಪ. ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷರಾದ ಕೆ. ವೇಣುಗೋಪಾಲ್ ಶೆಟ್ಟಿ ಮಾತನಾಡಿ “ಕರಾವಳಿ ಪ್ರದೇಶದಲ್ಲಿ ಬೇರೆ ಬೇರೆ ಮಾತೃಭಾಷೆಗಳನ್ನು ಹೊಂದಿದ್ದರೂ ಕನ್ನಡಕ್ಕೆ ವಿಶೇಷ ಸ್ಥಾನಮಾನ ನೀಡುತ್ತಾ ಅದನ್ನು ನಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡಿದ್ದು ಉಲ್ಲೇಖನೀಯ.” ಎಂದರು. ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಶೆಟ್ಟಿ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿನಿ ಖ್ಯಾತಿ ಪ್ರಾರ್ಥಿಸಿ, ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ ರಾಧಾಕೃಷ್ಣ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕ. ಸಾ. ಪ. ತಾಲೂಕು ಘಟಕದ ಕಾರ್ಯದರ್ಶಿ ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ವಿಜಯಲಕ್ಷ್ಮಿ ಮಾರ್ಲಾ ವಂದಿಸಿದರು.