ಶಿವಮೊಗ್ಗ : ಶಿವಮೊಗ್ಗದ ಕರ್ನಾಟಕ ಸಂಘವು 2026ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಕಟಿಸಿದ್ದು, ‘ಡಾ. ದ.ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ‘ಪ್ರೊ. ತೀ.ನಂ.ಶ್ರೀ ಸಾಹಿತ್ಯ ವಿಮರ್ಶೆ ಪ್ರಶಸ್ತಿ’ಗೆ ಬೆಂಗಳೂರಿನ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಇವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ. ಇಪ್ಪತ್ತೈದು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಪ್ರೊ. ಎಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗುವುದು ಎಂದು ಸಂಘ ತಿಳಿಸಿದೆ.


