ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ -2’ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮವನ್ನು ದಿನಾಂಕ 28 ಜೂನ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ಸೂರಂಬೈಲ್ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ವಿ.ಬಿ. ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಕಾರ್ಳೆ ಶ್ರೀ ಕಾಳಿಕಾಂಬಾ ದೇವಸ್ಥಾನದ ತಂತ್ರಿವರ್ಯ ಬ್ರಹ್ಮಶ್ರೀ ಪುರೋಹಿತ ಕೆ. ರಾಮಕೃಷ್ಣ ಆಚಾರ್ಯ ಇವರು ಉದ್ಘಾಟನೆ ಮಾಡಲಿದ್ದಾರೆ. ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ, ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಮತ್ತು ಸಾಹಿತಿ ವಿರಾಜ್ ಅಡೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.