ಕಾಸರಗೋಡು : ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ‘ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ -3’ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮವನ್ನು ದಿನಾಂಕ 12 ಜುಲೈ 2025ರಂದು ಬೆಳಿಗ್ಗೆ 10-00 ಗಂಟೆಗೆ ಕಾಸರಗೋಡಿನ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವು ಆಡಳಿತ ಸೇವಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಬೆಜಪ್ಪೆ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಸಂಚಾಲಕರಾದ ಡಾ. ವಾಮನ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಇವರು ಉದ್ಘಾಟನೆ ಮಾಡಲಿದ್ದಾರೆ. ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ ಮತ್ತು ಸಾಹಿತಿ ವಿರಾಜ್ ಅಡೂರು ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.