ಕೊಣಾಜೆ: ಬೊಟ್ಟಿಕೆರೆಯ ಅಂಬುರುಹ ಯಕ್ಷ ಪ್ರತಿಷ್ಠಾನದ ವತಿಯಿಂದ ಅಂಬುರುಹದಲ್ಲಿ ಯಕ್ಷಶ್ರಾವಣ 2023 ಹಾಗೂ ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಯಕ್ಷಗಾನ ಪ್ರಸಂಗ ‘ಲೋಕಾಭಿರಾಮ’ ಕೃತಿ ಬಿಡುಗಡೆಕಾರ್ಯಕ್ರಮವು ದಿನಾಂಕ 17-09-2023ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ವಿ.ವಿ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಶ್ರೀಪತಿ ಕಲ್ಲೂರಾಯ “ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಯಕ್ಷಗಾನದ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ತೊಡಗಿಕೊಂಡು ಸವ್ಯಸಾಚಿಯಾಗಿ ಗುರುತಿಸಿಕೊಂಡವರು. ಜೊತೆಗೆ ಯಕ್ಷಗಾನ ಸಾಹಿತ್ಯ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಓರ್ವ ವಿದ್ವತ್ ಪೂರ್ಣ ಕಲಾವಿದ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟಿಕೆರೆಯ ಅಂಬುರುಹ ಯಕ್ಷ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಪೂಂಜ ವಹಿಸಿದ್ದರು. ಪ್ರತಿಷ್ಠಾನದ ಉಪಾಧ್ಯಕ್ಷ ರಾಂ ಹೊಳ್ಳ ಸ್ವಾಗತಿಸಿ, ದೀವಿತ್ ಕೋಟ್ಯಾನ್ ಕೃತಿಯನ್ನು ಪರಿಚಯಿಸಿ, ಸದಾಶಿವ ಆಳ್ವ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಲೋಕಾಭಿರಾಮ ಪ್ರಸಂಗದ ಆಯ್ದ ಭಾಗದ ಯಕ್ಷಗಾನ ತಾಳಮದ್ದಳೆ ಹಾಗೂ ನರಶಾರ್ದೂಲ ಯಕ್ಷಗಾನ ಪ್ರದರ್ಶನ ನಡೆಯಿತು.
Subscribe to Updates
Get the latest creative news from FooBar about art, design and business.