Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಾರ್ಕಳದ ಸಂಭ್ರಮ ಸಭಾಂಗಣದಲ್ಲಿ ‘ಮಹಾಭಾರತ ಭಾವದೀಪ’ ಉಪನ್ಯಾಸಮಾಲೆ
    Literature

    ಕಾರ್ಕಳದ ಸಂಭ್ರಮ ಸಭಾಂಗಣದಲ್ಲಿ ‘ಮಹಾಭಾರತ ಭಾವದೀಪ’ ಉಪನ್ಯಾಸಮಾಲೆ

    June 30, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ 2026ರ ವರ್ಷಪೂರ್ತಿ ಪ್ರತೀ ತಿಂಗಳು ನಡೆಯುತ್ತಿರುವ ಮಹಾಭಾರತ ಭಾವದೀಪ ಎಂಬ ಉಪನ್ಯಾಸಮಾಲೆಯ ಷಷ್ಠ ಸೋಪಾನದಲ್ಲಿ ‘ಧರ್ಮನಂದನ’ ಎಂಬ ಕುರಿತಾಗಿ ದಿನಾಂಕ 27 ಜೂನ್ 2026ರಂದು ಕಾರ್ಕಳದ ಪ್ರಕಾಶ್ ಹೋಟೆಲ್ ಇದರ ‘ಸಂಭ್ರಮ’ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

    ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ವಿದ್ವಾಂಸರಾದ ಡಾ. ವಿನಾಯಕ ಭಟ್ ಗಾಳಿಮನೆಯವರು “ಮಹಾಭಾರತದಲ್ಲಿ ಎಲ್ಲ ಪಾತ್ರಗಳೂ ನಾಯಕರಂತೆ ವಿಜೃಂಭಿಸಿ ಧರ್ಮರಾಯ ಮಾತ್ರ ಮೂಲೆಗುಂಪಾಗುವಂತಾದರೂ ವ್ಯಾಸರು ಮಾತ್ರ ಆತನನ್ನು ರಾಜನನ್ನಾಗಿ ಇಟ್ಟುಕೊಂಡು ಧರ್ಮರಾಜನಾಗಿ ನೋಡಿಕೊಂಡರು. ಮಹಾಭಾರತದ ಒಟ್ಟು ಸಾರವಾಗಿ ನಾವು ನೋಡುವುದು ಧರ್ಮವನ್ನೇ ಆಗಿದೆ. ಅಧರ್ಮದಿಂದ ಗಳಿಸುವ ಸಕಲ ಸಂಪತ್ತು, ಕೀರ್ತಿ ಪ್ರತಿಷ್ಠೆಗಳು ಅಶಾಶ್ವತವಾಗಿದ್ದು ಧರ್ಮಮಾರ್ಗದಿಂದ ಗಳಿಸುವಂಥಾದ್ದೇ ಶಾಶ್ವತ ಎಂಬುದನ್ನು ಪ್ರತಿಪಾದಿಸಿದ ಧರ್ಮರಾಯ ಯಾವ ಸಂದರ್ಭದಲ್ಲಿಯೂ ಧರ್ಮಪ್ರಜ್ಞೆಯನ್ನು ಬೀಳಲು ಬಿಡದೆ ಅದನ್ನೇ ಬದುಕಾಗಿಸಿಕೊಂಡು ಪಾಂಡವರ ಏಕಸೂತ್ರತೆಯನ್ನೂ ಕಾಪಾಡಿದ. ಸಂಘರ್ಷವೆಂಬ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ದುರ್ಯೋಧನ ಮಾಡುತ್ತಾ ಬಂದರೆ ಅದಕ್ಕೆ ನೀರು ಸುರಿಯುವ ಕಾರ್ಯವನ್ನು ಧರ್ಮರಾಯ ಮಾಡುತ್ತಾ ಬಂದು ಎತ್ತರದಲ್ಲಿ ನಿಲ್ಲುತ್ತಾನೆ” ಎಂದರು.

    ಡಾ. ನಾ. ಮೊಗಸಾಲೆ, ನಿತ್ಯಾನಂದ ಪೈ, ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಏರ್‌ವೈಸ್ ಮಾರ್ಷೆಲ್ ರಮೇಶ್ ಕಾರ್ಣಿಕ್, ಅಲ್ಲಮಪ್ರಭು ಪೀಠದ ಪ್ರಧಾನ ನಿರ್ದೇಶಕರಾದ ತೆ. ವಿಜಯ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಶಾರ್ವರಿ ಪ್ರಾರ್ಥಿಸಿ, ಡಾ. ಮಾಲತಿ ಜಿ. ಪೈ ಕಾರ್ಯಕ್ರಮ ನಿರೂಪಿಸಿ, ಸದಾನಂದ ನಾರಾವಿ ಸ್ವಾಗತಿಸಿ, ಶ್ರೀಮತಿ ಸುಲೋಚನಾ ಬಿ.ವಿ. ವಂದಿಸಿದರು.

    baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕೇಂದ್ರದಲ್ಲಿ ‘ಸುಧನ್ವ ಕಾಳಗ’ ಯಕ್ಷಗಾನ ಪ್ರದರ್ಶನ
    Next Article ಕೋಟೇಶ್ವರದಲ್ಲಿ ‘ಅರ್ಥಾಂಕುರ’ ಮತ್ತು ಯಕ್ಷಲೋಕದ ಮಾಸದ ಬಣ್ಣ 100ರ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.