Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ | ಜೂನ್ 15

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪತ್ರಿಕಾ ಭವನದಲ್ಲಿ ಲೋಕರ್ಪಣೆಗೊಂಡ ‘ಮಹಾಪರ್ವ’ ಅಭಿನಂದನಾ ಸಂಪುಟ
    Book Release

    ಮಂಗಳೂರಿನ ಪತ್ರಿಕಾ ಭವನದಲ್ಲಿ ಲೋಕರ್ಪಣೆಗೊಂಡ ‘ಮಹಾಪರ್ವ’ ಅಭಿನಂದನಾ ಸಂಪುಟ

    April 5, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ ದಿನಾಂಕ 04 ಎಪ್ರಿಲ್ 2025ರಂದು ಹರಿದಾಸ ‘ದೇವಕಿತನಯ’ ಮಹಾಬಲ ಶೆಟ್ಟಿ ಕೂಡ್ಲು ಇವರ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರ ಸಂಪಾದಕತ್ವದಲ್ಲಿ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಲೋಕರ್ಪಣೆಗೊಂಡಿತು.

    ಈ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ “ಸಾಧಕರ ಬದುಕಿನಲ್ಲಿ ಏಳು ಬೀಳುಗಳು ಸಹಜ. ಅವರ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿಸಿದರೆ ಅದು ಮುಂದಿನ ಪೀಳಿಗೆಗೆ ದಾರಿದೀಪವಾಗುತ್ತದೆ. ಹಾಗೆಯೇ ಅಂಥವರ ಬದುಕು ಬವಣೆಗಳಿಂದ ನಾಳಿನ ಜನಾಂಗ ಸಾಕಷ್ಟು ಪಾಠವನ್ನೂ ಕಲಿತಂತಾಗುವುದು. ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿಯವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಅದುವೇ ಸ್ಫೂರ್ತಿಯಾಗುವುದು” ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ “ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ ಮಾಡುವ ಮೂಲಕ ಮಹಾಬಲ ಶೆಟ್ಟಿಯವರು ಧರ್ಮಜಾಗೃತಿಯ ಕೆಲಸ ಮಾಡುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು.

    ‘ಮಹಾಪರ್ವ’ ಸಂಪಾದಕ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರು ಮಾತನಾಡಿ, “ಮಹಾಬಲ ಶೆಟ್ಟಿಯವರು ಅನೇಕ ಸಂಕಷ್ಟಗಳನ್ನು ಅನುಭವಿಸಿ ಸಾಧನೆಯ ಶಿಖರವೇರಿದ್ದಾರೆ. 50 ವರ್ಷಗಳ ಹರಿಕಥಾಯಾನ ಪೂರೈಸಿದ ಅಪರೂಪದ ಹರಿದಾಸರು. ಹರಿಕಥೆ ಕಲೆಯನ್ನು ಉಳಿಸಿ, ಬೆಳೆಸಲು ಪ್ರಥಮ ಬಾರಿಗೆ ಹರಿಕಥಾ ಪರಿಷತ್ ಹುಟ್ಟು ಹಾಕಿದ್ದಾರೆ. ಹಲವಾರು ಹರಿದಾಸರನ್ನು ಸೃಷ್ಟಿಸಿದ್ದಾರೆ. ಅವರಿಗೆ ಎಂಭತ್ತು ತುಂಬಿದ ಸಂದರ್ಭದಲ್ಲಿ ಅವರ ಬದುಕಿನ ಚಿತ್ರಣದೊಂದಿಗೆ ಹರಿಕಥೆ ಮತ್ತದರ ಸೋದರಕಲೆಗಳ ಬಗ್ಗೆ ವಿದ್ವಾಂಸರು ಬರೆದ ಮಹತ್ವದ ಲೇಖನಗಳನ್ನೊಳಗೊಂಡ ಅಭಿನಂದನಾ ಸಂಪುಟ ಒಂದು ಸಂಗ್ರಾಹ್ಯ ಗ್ರಂಥವಾಗಿ ಹೊರಬರುತ್ತಿದೆ” ಎಂದರು.

    ಮಹಾಬಲ ಶೆಟ್ಟಿ ಕೂಡ್ಲು ಇವರು ಮಾತನಾಡಿ “ಶೇಣಿ ಗೋಪಾಲಕೃಷ್ಣ ಭಟ್ ಅವರಿಂದಾಗಿ ಹರಿದಾಸನಾದೆ. ಹರಿಕಥೆ ನಶಿಸುವ ಕಲೆ ಅಲ್ಲ. ಅದು ಇನ್ನಷ್ಟು ಪ್ರಭಾವಶಾಲಿ ರೂಪದಲ್ಲಿ ಮೂಡಿಬರುವಂತಾಗಬೇಕು” ಎಂದರು. ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ವಕೀಲ ಗುರುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಹರಿಕಥಾ ಪರಿಷತ್‌ನ ಖಜಾಂಜಿ ಎಸ್.ಪಿ. ಗುರುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಸುಧಾಕರ ರಾವ್ ಪೇಜಾವರ ಸ್ವಾಗತಿಸಿ, ಪ್ರೊ. ಜಿ.ಕೆ. ಭಟ್ ವಂದಿಸಿದರು. ಹರಿಕಥಾ ಪರಿಷತ್‌ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    baikady Book release Harikathe Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ‘ಪ್ರತಿಭಾ ಸಂಪನ್ನ ಕಲಾಪಟು’ ಸನತ್ಕುಮಾರ್ ಆಚಾರ್ಯ
    Next Article ಸಂತ ಅಲೋಶಿಯಸ್ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ‘ಅಶ್ವತ್ಥಾಮ’ ಕನ್ನಡ ನಾಟಕ ಪ್ರದರ್ಶನ | ಏಪ್ರಿಲ್ 08
    roovari

    Add Comment Cancel Reply


    Related Posts

    ಬದಿಯಡ್ಕದಲ್ಲಿ  ಕವಿ ನಾಡೋಜ ಕೈಯಾರ ಕಿಂಞಣ್ಣ ರೈ ಅವರ 110ನೇ ಜನ್ಮದಿನಾಚರಣೆ

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ | ಜೂನ್ 15

    June 10, 2025

    ಬೆಂಗಳೂರಿನ ಸೇವಾ ಸದನದಲ್ಲಿ 19ನೇ ಹಾರ್ಮೋನಿಯಂ ಹಬ್ಬ | ಜೂನ್ 15

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.