Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಂಟ್ವಾಳದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ‘ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮ
    Literature

    ಬಂಟ್ವಾಳದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ‘ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮ

    October 20, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡು ಸಂಚಯಗಿರಿ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಏರ್ಪಡಿಸಲಾದ ‘ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮವು ದಿನಾಂಕ 17 ಅಕ್ಟೋಬರ್ 2024ರಂದು ನಡೆಯಿತು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು‌ ಅಧ್ಯಯನ ಕೇಂದ್ರದ ಸಂಚಾಲಕ ಡಾ. ತುಕಾರಾಮ ಪೂಜಾರಿಯವರು “ಮಹರ್ಷಿ ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯವನ್ನು ಲೋಕಕ್ಕೆ ಅರ್ಪಣೆ ಮಾಡಿದ ಮಹಾನ್ ದಾರ್ಶನಿಕರು. ಸಹಸ್ರಾರು ವರ್ಷಗಳ ಇತಿಹಾಸದ ಹಿನ್ನಲೆಯಲ್ಲಿ ಶ್ರೀರಾಮನ ವ್ಯಕ್ತಿತ್ವದ ಮೂಲಕ ಪರಮಾತ್ಮನನ್ನು ಜಗತ್ತಿಗೆ ಪರಿಚಯಿಸಿದರು‌” ಎಂದು ಅಭಿಪ್ರಾಯಪಟ್ಟರು.

    ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಜಯಾನಂದ ಪೆರಾಜೆ ಮಾತನಾಡಿ “ರಾಮಾಯಣ ಕಾವ್ಯ ಭಾರತೀಯ ಸಂಸ್ಕೃತಿಯ ಅಡಿಪಾಯ. ಮಾನವ ಮತ್ತು ಪ್ರಕೃತಿಯ ಅವಿನಾಭಾವ ಸಂಬಂಧಗಳನ್ನು ಸುಂದರ ರೂಪಕಗಳ ಮೂಲಕ ಕಟ್ಟಿಕೊಟ್ಟು ಸಾರ್ವಕಾಲಿಕ ಮೌಲ್ಯಗಳನ್ನು ವಾಲ್ಮೀಕಿ ಮಹರ್ಷಿ ತಿಳಿಸಿದ್ದಾರೆ” ಎಂದರು.

    ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಂಚಾಲಕ ಕೈಯೂರು ನಾರಾಯಣ ಭಟ್, ನಿವೃತ್ತ ಉಪನ್ಯಾಸಕ ಸುಬ್ರಾಯ ಮಡಿವಾಳ, ಕೋಕಳ ರಾಮಕೃಷ್ಣ ನಾಯಕ್, ನಿವೃತ್ತ ಮುಖ್ಯೋಪಾಧ್ಯಾಯ ಅನಾರು ಕೃಷ್ಣ ಶರ್ಮ, ನಿವೃತ್ತ ಆರೋಗ್ಯ ಇಲಾಖಾಧಿಕಾರಿ ಜಯರಾಮ ಪೂಜಾರಿ ಇವರುಗಳು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಅ.ಭಾ.ಸಾ.ಪ. ಬಂಟ್ವಾಳ ತಾಲೂಕು‌ ಅಧ್ಯಕ್ಷರಾದ ಪ್ರೊ. ರಾಜಮಣಿ ರಾಮಕುಂಜ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮಧುರಾ ಕಡ್ಯ ಕಲ್ಲಡ್ಕ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಇಳಕಲ್ಲಿನ ಮಹಾಂತೇಶ್ ಎಂ. ಗಜೇಂದ್ರಗಡ ಇವರಿಗೆ 2024ನೇ ಸಾಲಿನ `ಶ್ರೀ ಶಿವಕುಮಾರ ಪ್ರಶಸ್ತಿ’ 
    Next Article ಯಕ್ಷಗಾನ ಕಲಾಕೇಂದ್ರದ ಐವತ್ತರ ಸಂಭ್ರಮ ಪ್ರಯುಕ್ತ ‘ಯಕ್ಷ ಸಪ್ತೋತ್ಸವ 2024’ | ಅಕ್ಟೋಬರ್ 21ರಿಂದ 27
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.