Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಇದು ನಿಮ್ಮ ಮನೆಯ ‘ಮಕ್ಕಳ ಜಗಲಿ’ www.makkalajagali.com
    Article

    ಇದು ನಿಮ್ಮ ಮನೆಯ ‘ಮಕ್ಕಳ ಜಗಲಿ’ www.makkalajagali.com

    April 14, 2023Updated:April 15, 20233 Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    14 ಏಪ್ರಿಲ್ 2023, ಬಂಟ್ವಾಳ: ಕೊರೋನ ಸಮಯದ ಸಂಧಿಗ್ಧತೆಯು ನಮಗೆ ಅನೇಕ ಪಾಠಗಳನ್ನು ಕಲಿಸಿದೆ. ನಮ್ಮ ನಿತ್ಯದ ಚಟುವಟಿಕೆಗಳಲ್ಲಿ ಅನೇಕ ಬದಲಾವಣೆಗಳಾಗಿವೆ. ಒಟ್ಟಾಗಿ ಹೇಳುವುದಾದರೆ ಹೊಸತೊಂದು ಹುಡುಕಲು ಅಥವಾ ಪರ್ಯಾಯವಾಗಿ ಶೋಧಿಸಲು ಕಾರಣವಾಗಿದೆ.

    ಮಕ್ಕಳ ಶೈಕ್ಷಣಿಕ ವ್ಯವಸ್ಥೆಯಲ್ಲಿ ಏರು ಪೇರುಗಳಾಗಿ ಡಿಜಿಟಲ್ ಪದ್ಧತಿ ಸಾಧಕ ಬಾಧಕಗಳ ನಡುವೆಯೇ ಪಾಠ ಬೋಧನೆಗಳನ್ನು ನಡೆಸಬೇಕಾದ ಅನಿವಾರ್ಯತೆ ಎದುರಾದಂತಹ ಸಂದರ್ಭದಲ್ಲಿ ಮಕ್ಕಳು ನಿತ್ಯ ಕಲಿಕಾ ಚಟುವಟಿಕೆಯಿಂದ ಇರಬೇಕಾದುದನ್ನು ಮನಗಂಡು ಕಂಡುಕೊಂಡ ಫಲವೇ ಮಕ್ಕಳ ಜಗಲಿ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢ ಶಾಲೆ ಮಂಚಿ ಕೊಳ್ನಾಡು, ಈ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಕ್ರಿಯಾಶೀಲರನ್ನಾಗಿಸುವ ಯೋಜನೆಯನ್ನು ರೂಪಿಸಲಾಯಿತು. ವಿವಿಧ ಸ್ಪರ್ಧೆಗಳ ಮೂಲಕ ಹಾಗೂ ವೀಕೆಂಡ್ ಟಾಸ್ಕ್ ಅನ್ನುವ ವೈವಿಧ್ಯ ಚಟುವಟಿಕೆಯ ಮೂಲಕ ಮಕ್ಕಳು ನಿರಂತರವಾಗಿ ಭಾಗವಹಿಸುವುದನ್ನು ಗಮನಿಸಿಕೊಳ್ಳಲಾಯಿತು. ಮಕ್ಕಳ ಆಸಕ್ತಿ ಕುತೂಹಲಗಳನ್ನು ಗಮನಿಸಿ ಒಂದು ಹೆಜ್ಜೆ ಮುಂದುವರಿದಂತೆ ಮಕ್ಕಳ ಪತ್ರಿಕೆಯನ್ನು ನಡೆಸುವ ಚಿಂತನೆ ಆರಂಭವಾಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿಗಳಿಗೆ ಪೂರಕವಾಗುವಂತೆ ಮಕ್ಕಳ ಜಗಲಿ ಪತ್ರಿಕೆಯನ್ನು ಆರಂಭಿಸುವ ಎಲ್ಲಾ ನಿರ್ಧಾರಗಳು ಸರಿಯಾದ ದಿಕ್ಕಿನಲ್ಲೇ ಸಾಗಿತು.

    ಮಕ್ಕಳ ಜಗಲಿ ಇದು ಮಕ್ಕಳಿಗಾಗಿ ಮೀಸಲಾದ ಇ-ಪತ್ರಿಕೆ. ಮಕ್ಕಳ ಮನಸ್ಸಿನ ಭಾವನೆಗಳನ್ನು ವೈವಿಧ್ಯ ಪ್ರಕಾರಗಳಲ್ಲಿ ಪ್ರಕಟ ಪಡಿಸಲು ಇರುವಂತಹ ವೇದಿಕೆ. ಮಕ್ಕಳ ಸ್ವರಚಿತ ಕಥೆ, ಲೇಖನ, ಕವನ, ಆರ್ಟ್ ಮತ್ತು ಕ್ರಾಪ್ಟ್ ಹೀಗೆ ಹಲವಾರು ಮಕ್ಕಳ ಸೃಜನಾತ್ಮಕ ಸಾಹಿತ್ಯ ಮತ್ತು ಕಲಾ ಚಟುವಟಿಕೆಗಳಿಗೆ ಪ್ರೇರಣೆ ನೀಡಲು ಸಹಕಾರಿಯಾಗಬಲ್ಲುದು.

    ಹಳೆ ಶೈಲಿ ಮನೆಗಳಲ್ಲಿ ಹೆಚ್ಚಾಗಿ ಮನೆ ಮುಂದೆ ಜಗಲಿ ಇರುತ್ತಿತ್ತು. ಮನೆ ಮಕ್ಕಳೆಲ್ಲಾ ಜಗಲಿ ಮೇಲೆ ಕುಳಿತು ಬರೆಯುವುದು, ಓದುವುದು, ಹಾಡುವುದು, ರಂಗೋಲಿ ಬಿಡಿಸುವುದು, ಕಲ್ಲಾಟವಾಡುವುದು ಹೀಗೆ ಹಲವು ಚಟುವಟಿಕೆಗಳಿಗೆ ಅದುವೇ ವೇದಿಕೆ. ನನ್ನಂತಹ ಅನೇಕರಿಗೆ ಜೀವನದ ಹಲವು ಮೈಲುಗಲ್ಲುಗಳನ್ನು ಯಶಸ್ವಿಯಾಗಿ ದಾಟಲು ಮನೆ ಜಗಲಿ ಪ್ರೇರಣೆ ನೀಡಿದೆ. ಜಗಲಿ ಮಾಯವಾಗಬಾರದು, ಅದನ್ನು ಮತ್ತೆ ಕಟ್ಟಬೇಕೆಂದು ಕನಸು.

    ಮಂಚಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಶೀಲ ವಿಟ್ಲ, ವಿಜ್ಞಾನ ಶಿಕ್ಷಕರಾದ ಶ್ರೀ ವಿ. ಶ್ರೀರಾಮಮೂರ್ತಿ, ಸಹೋದ್ಯೋಗಿ ಬಂಧುಗಳು, ಶಾಲಾ ಎಸ್.ಡಿ.ಎಂ.ಸಿ, ಶಾಲಾ ಮಕ್ಕಳು, ಜಗಲಿಯ ಕನಸಿಗೆ ಸಾಕ್ಷಿಗಳು. ಸೃಜನಶೀಲ ಚಿಂತನೆಗಳಿಗೆ ರೂಪ ಕೊಟ್ಟಂತಹ ಶಿಕ್ಷಣ ಚಿಂತಕ ಗೋಪಾಡ್ಕರ್, ಸ್ಪೂರ್ತಿಯಾಗಿರುವ ರಂಗ ನಿರ್ದೇಶಕ ಜೀವನ್ ರಾಮ್ ಸುಳ್ಯ ಪ್ರೇರಣೆಯನ್ನು ನೀಡುತ್ತಾ ಬಂದಿರುವ ಕಲಾವಿದ, ಸಾಹಿತಿ ದಿನೇಶ ಹೊಳ್ಳ, ತಾಂತ್ರಿಕ ಸಹಕಾರ ನೀಡುತ್ತಿರುವ ಪತ್ರಕರ್ತ ಮಿತ್ರರಾದ ವಿನೋದ್ ಪುದು, ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಶ್ರೀ ಮಲ್ಲೇಸ್ವಾಮಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಜ್ಞಾನೇಶ್, ಮಾರ್ಗದರ್ಶಕರಾದ ಶ್ರೀ ವೈ. ಶಿವರಾಮಯ್ಯ, ಶಿವಪ್ರಕಾಶ ಎನ್. ಇವರೆಲ್ಲ ಕನಸಿನ ಜಗಲಿಯ ಪಾಲುದಾರರು.

    ಮಕ್ಕಳ ಜಗಲಿಯನ್ನು ಎಲ್ಲರ ಮನ ಮನೆಗಳಿಗೆ ತಲುಪಿಸಬೇಕೆಂದು ನಮ್ಮ ಗುರಿಯಾಗಿದೆ. ಈ ಸಂದರ್ಭದಲ್ಲಿ ಶೀರ್ಷಿಕೆ ಗೀತೆಯನ್ನು ನಿರ್ಮಿಸಿ ಪ್ರಸಾರ ಮಾಡುವ ಆಲೋಚನೆ ಮೂಡಿತು. ಸಾಹಿತಿ ಚಂದ್ರಶೇಖರ ಪಾತೂರು ಬರೆದ ಸಾಹಿತ್ಯಕ್ಕೆ ಮಂಗಳೂರಿನ ಕೋಣಾಜೆ ವಿಶ್ವ ಮಂಗಳ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರೀರಕ್ಷಾ ಎಸ್.ಎಚ್. ಪೂಜಾರಿ ಅದ್ಭುತವಾಗಿ ಹಾಡಿದಳು. ಪುತ್ತೂರಿನ ಮಕ್ಕಳ ಮಂಟಪದ ಅನೇಕ ಪುಟಾಣಿಗಳು ಈ ದೃಶ್ಯ ಸಂಯೋಜನೆಯಲ್ಲಿ ಹಾಡಿ ನಲಿದರು. ಮಕ್ಕಳ ಜಗಲಿಯ ಹಾಡು ಎಲ್ಲರನ್ನು ತಲುಪುವ ಮೂಲಕ ಜಗಲಿಗೆ ಬರೆಯುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿತು.

    ಮಕ್ಕಳ ಜಗಲಿ ಅದು ನಿಮ್ಮ ಮನೆಯ ಮಕ್ಕಳ ಜಗಲಿ. ಇಲ್ಲಿ ಸಣ್ಣ ಮಕ್ಕಳಿಂದ ಪಿ.ಯು.ಸಿ.ವರೆಗೆ ಕಲಿಯುತ್ತಿರುವ ಮಕ್ಕಳಿಗೆ ಅವಕಾಶ ನೀಡುತ್ತಿದ್ದೇವೆ. ಎಲ್ಲಾ ಮನೆಯ ಮಕ್ಕಳೂ ಶ್ರೇಷ್ಠರೇ. ಅವರಿಗೆ ಅವಕಾಶ ಕೊಡಬೇಕಾದದ್ದು ಹಿರಿಯರಾದ ನಮ್ಮ ಕರ್ತವ್ಯ. ಆ ಮೂಲಕ ಪ್ರತಿಯೊಂದು ಮನೆಯ ಮಕ್ಕಳನ್ನು ಜಗಲಿಯಲ್ಲಿ ಸ್ವತಂತ್ರವಾಗಿ ಬೆಳೆಯಲು ಬಿಡಿ ಎಂದು ನಮ್ಮ ಬೇಡಿಕೆ.

    2020ನೇಯ ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಉದ್ಘಾಟನೆಗೊಂಡು ಮಕ್ಕಳ ಪ್ರತಿಭಾ ವೇದಿಕೆಯಾಗಿ ಗುರುತಿಸಿಕೊಂಡಿತು. ದ.ಕ. ಜಿಲ್ಲೆಗೆ ಮಾತ್ರ ಮೀಸಲಿದ್ದ ಈ ವೇದಿಕೆ ಈಗ ವಿಸ್ತಾರಗೊಂಡು ರಾಜ್ಯದ ವಿವಿಧ ಜಿಲ್ಲೆಗಳಿಗೂ ವ್ಯಾಪಿಸಿದೆ. ಹೊರ ರಾಷ್ಟದಲ್ಲಿ ವಾಸವಿರುವ ಭಾರತೀಯ ವಿದ್ಯಾರ್ಥಿಗಳೂ ಮಕ್ಕಳ ಜಗಲಿಗೆ ಬೆರೆಯುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ. ಪ್ರತಿಭಾನ್ವಿತ ಮಕ್ಕಳು ಬೆಳೆಯಬೇಕೆಂದು ನಮ್ಮ ಉದ್ದೇಶ. ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂದು ಪ್ರೋತ್ಸಾಹದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ಜಗಲಿ ಸದಾ ಸಿದ್ದವಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಏಪ್ರಿಲ್ 15ಕ್ಕೆ ಎಡನೀರು ಮಠದಲ್ಲಿ ‘ಗಮಕ ಗಾಯನ ಗಾರುಡಿಗ ಪ್ರಶಸ್ತಿ’ ಮತ್ತು ‘ಕವಿಗೋಷ್ಠಿ’
    Next Article ನಾಟಕ ವಿಮರ್ಶೆ: ಭೂತ-ವರ್ತಮಾನ-ಭವಿಷ್ಯತಗಳ ದರ್ಶಿಸುವ “ಮಾಯಾ ಬೇಟೆ” – ವಿಮರ್ಶಕ ಜಗದೀಶ್ ಕೆಂಗನಾಳ್
    roovari

    3 Comments

    1. ಸಿಂಚನ on April 15, 2023 9:07 am

      I am a student

      Reply
    2. ಸಿಂಚನ on April 15, 2023 9:07 am

      I am a student

      Reply
      • roovari on April 15, 2023 11:26 am

        Kindly contact Tharanath Kairangal +91 98448 20979

        Reply

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    3 Comments

    1. ಸಿಂಚನ on April 15, 2023 9:07 am

      I am a student

      Reply
    2. ಸಿಂಚನ on April 15, 2023 9:07 am

      I am a student

      Reply
      • roovari on April 15, 2023 11:26 am

        Kindly contact Tharanath Kairangal +91 98448 20979

        Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.