ಉಡುಪಿ : ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ವಿಶ್ವರಂಗಭೂಮಿ ದಿನಾಚರಣೆ ಪ್ರಯುಕ್ತ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 26 ಮಾರ್ಚ್ 2025ರ ಬುಧವಾರದಂದು ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ನಡೆಯಿತು.
ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಇವರ ಅಧ್ಯಕ್ಷತೆಯಲ್ಲಿ ನಡೆಡಾ ಈ ಸಮಾರಂಭದಲ್ಲಿ ರಂಗ ನಟ, ನಿರ್ದೇಶಕ ಅರವಿಂದ ಕುಲಕರ್ಣಿ ಧಾರವಾಡ, ರಂಗ ಸಂಘಟಕ ಹಾಗೂ ನಿರ್ದೇಶಕ ಗಣೇಶ್ ಕಾರಂತ್ ಬೈಂದೂರು, ರಂಗನಟಿ, ಕಂಠದಾನ ಕಲಾವಿದೆ ಪ್ರಿಯಾ ಸರೋಜಾ ದೇವಿ ಮುಂಬೈ, ರಂಗನಟ ಪ್ರಕಾಶ್ ಜಿ. ಕೊಡವೂರು, ರಂಗನಟಿ ಮಂಜುಳಾ ಜನಾರ್ದನ್ ಮಂಗಳೂರು ಇವರಿಗೆ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿಪದಕದೊಂದಿಗೆ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ದಂತ ವೈದ್ಯರಾದ ಡಾ. ವಿಜಯೇಂದ್ರ ರಾವ್ ಹಾಗೂ ಉದ್ಯಮಿ ಸುಗುಣ ಸುವರ್ಣ ಮಾತನಾಡಿದರು.
ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ಶಂಕರ್, ಗೌರವಾಧ್ಯಕ್ಷ ಯು.ವಿಶ್ವನಾಥ ಶೆಣೈ, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಜ್ ರೆಹೇಮನ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಯು. ಪಿ. ಎಂ. ಇದರ ಯುವ ಸಂಚಯದ ಬೀದಿ ನಾಟಕ ತಂಡವನ್ನು ಗೌರವಿಸಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ ಸ್ವಾಗತಿಸಿ, ರಾಜೇಶ್ ಭಟ್ ಪಣಿಯಾಡಿ ಕಾರ್ಯಕ್ರಮ ನಿರೂಪಿಸಿ, ಸಂಧ್ಯಾ ಶೆಣೈ ವಂದಿಸಿದರು. ಕಾರ್ಯಕ್ರಮಕ್ಕೆ ಮೊದಲು ಸ್ವಸ್ತಿಶ್ರೀ ಅವರಿಂದ ನೃತ್ಯ ಕಾರ್ಯಕ್ರಮ ಜರುಗಿತು.
Subscribe to Updates
Get the latest creative news from FooBar about art, design and business.
Next Article ಮಂಗಳೂರಿನಲ್ಲಿ ಉದ್ಘಾಟನೆಗೊಂಡ ಅರೆಹೊಳೆ ನಾಟಕೋತ್ಸವ