ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ‘ಮಳೆ ಹಾಡುಗಳ ಕಲರವ’ ಕಾರ್ಯಕ್ರಮವು ದಿನಾಂಕ 09-08-2023ನೇ ಬುಧವಾರ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲದಲ್ಲಿ ಪೂರ್ವಾಹ್ನ 11.00ರಿಂದ ನಡೆಯಲಿದೆ.
ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಸಂಚಾಲಕರಾದ ಶ್ರೀ ಪಿ.ಜಿ.ಎಸ್.ಎನ್.ಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಾಲೆಯ ಮುಖ್ಯಶಿಕ್ಷಕರಾದ ಶ್ರೀ ಯಶೋಧರ ನಾರಾಲು ಉಪಸ್ಥಿತರಿರುವರು. ಸುಳ್ಯದ ಭಾವನಾ ಸುಗಮ ಸಂಗೀತ ಬಳಗ (ರಿ.) ಇದರ ಶ್ರೀ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಕ.ಸಾ.ಪ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

