ಸುಳ್ಯ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಆಶ್ರಯದಲ್ಲಿ ಸಂಗೀತ ವರ್ಷಧಾರೆ ‘ಮಳೆ ಹಾಡುಗಳ ಕಲರವ’ ಕಾರ್ಯಕ್ರಮವು ದಿನಾಂಕ 12-08-2023ನೇ ಶನಿವಾರ ಪೂರ್ವಾಹ್ನ 11-00ರಿಂದ ನಡೆಯಲಿದೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಶ್ರೀನಾಥ ರೈ ಬಾಳಿಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಉಮಾಕುಮಾರಿ ಉಪಸ್ಥಿತರಿರುವರು. ಸುಳ್ಯದ ಭಾವನಾ ಸುಗಮ ಸಂಗೀತ ಬಳಗ (ರಿ.) ಇದರ ಶ್ರೀ ಕೆ.ಆರ್ ಗೋಪಾಲಕೃಷ್ಣ ಮತ್ತು ಬಳಗ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದು, ಕ.ಸಾ.ಪ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

