ಬಂಟ್ವಾಳ : ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ (ರಿ.) ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಬಿ.ವಿ. ಕಾರಂತ ನೆನಪಿನ ‘ಮಂಚಿ ನಾಟಕೋತ್ಸವ’ ರಂಗ ಭೂಮಿಕಾ -2024 ದಿನಾಂಕ 17-05-2024ರಿಂದ 19-05-2024ರವರೆಗೆ ಕುಕ್ಕಾಜೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ 17-05-2024ರಂದು ಸಂಜೆ 6-00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಅಂತರಾಷ್ಟ್ರೀಯ ಜಾದೂಗಾರರಾದ ಪ್ರೊ. ಶಂಕರ್ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ನಾಟಕೋತ್ಸವವನ್ನು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಧ್ಯಕ್ಷರಾದ ಶ್ರೀ ವಿಶ್ವನಾಥ ಶೆಣೈ ಉಡುಪಿ ಇವರು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಲಿ. ಇದರ ನಿರ್ದೇಶಕರಾದ ಡಾ. ಜಯಪ್ರಕಾಶ್ ನಾರಾಯಣ ಟಿ.ಕೆ. ಮತ್ತು ಶಿವಮೊಗ್ಗ ರಂಗಾಯಣದ ಮಾಜಿ ನಿರ್ದೇಶಕರಾದ ಶ್ರೀ ಸಂದೇಶ ಜವಳಿ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ತೀರ್ಥಹಳ್ಳಿಯ ‘ನಟ ಮಿತ್ರರು’ ತಂಡದವರು ಶಿವಕುಮಾರ್ ತೀರ್ಥಹಳ್ಳಿ ಇವರ ನಿರ್ದೇಶನದಲ್ಲಿ ‘ಸಂಸಾರದಲ್ಲಿ ಸನಿದಪ’ ಕನ್ನಡ ನಾಟಕ ಪ್ರಸ್ತುತ ಪಡಿಸಲಿದ್ದಾರೆ.
ದಿನಾಂಕ 18-05-2024ರಂದು ಸಂಜೆ 6-00ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ ಶ್ರೀ ಪಡಾರು ಮಹಾಬಲೇಶ್ವರ ಭಟ್ಟ ಇವರು ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಡಿ. ಶೆಟ್ಟಿ, ಮಂಗಳೂರಿನ ಹೊಟೇಲ್ ಜನತಾ ಡಿಲಕ್ಸ್ ಇದರ ಮಾಲಕರಾದ ಶ್ರೀ ಪಿ. ಸೂರ್ಯನಾರಾಯಣ ರಾವ್ ಪತ್ತುಮುಡಿ ಮತ್ತು ಶಿವಮೊಗ್ಗದ ರಂಗ ನಿರ್ದೇಶಕರು ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಎಸ್.ಸಿ. ಗೌರಿಶಂಕರ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ‘ಅಭಿನಯ ಶಿವಮೊಗ್ಗ’ ತಂಡದವರು ಪ್ರೊ. ಎಸ್.ಸಿ. ಗೌರಿಶಂಕರ ಇವರ ರಚನೆ ಮತ್ತು ನಿರ್ದೇಶನದಲ್ಲಿ ‘ಪೀಠಾರೋಹಣ’ ಕನ್ನಡ ನಾಟಕ ಪ್ರಸ್ತುತ ಪಡಿಸಲಿದ್ದಾರೆ.
ದಿನಾಂಕ 19-05-2024ರಂದು ಸಂಜೆ 6-00ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಂ. ಅಶ್ವಿನ್ ಕುಮಾರ್ ರೈ ಇವರು ವಹಿಸಲಿದ್ದು, ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗಭೂಷಣ ಎಚ್.ಎಸ್. ಮತ್ತು ಬಂಟ್ವಾಳ ಕ.ಸಾ.ಪ.ದ ಅಧ್ಯಕ್ಷರಾದ ಶ್ರೀ ವಿಶ್ವನಾಥ್ ಬಿ. ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಶಿವಮೊಗ್ಗದ ‘ನಮ್ಮ ಹಳ್ಳಿ ಥಿಯೇಟರ್’ ತಂಡದವರಿಂದ ಪ್ರೊ. ಎಸ್.ಸಿ. ಗೌರಿಶಂಕರ ಇವರ ರಂಗ ರೂಪಾಂತರ ಮತ್ತು ನಿರ್ದೇಶನದಲ್ಲಿ ‘ಮಹಾಬಲಯ್ಯನ ಕೋಟು’ ಕನ್ನಡ ನಾಟಕ ಪ್ರದರ್ಶನ ನಡೆಯಲಿದೆ.