ಮಂಗಳೂರು : ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕನ್ನಡ ಚು.ಸಾ.ಪ. ಮಂಗಳೂರು ವಲಯ ಕಾರ್ಯಕ್ರಮ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ -2’ ದಿನಾಂಕ 27 ಜುಲೈ 2025ರಂದು ಅಪರಾಹ್ನ 3-00 ಗಂಟೆಗೆ ಮಂಗಳೂರಿನ ಚಿಲಿಂಬಿಯಲ್ಲಿರುವ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಇವರ ಮನೆಯಲ್ಲಿ ನಡೆಯಲಿದೆ.
ಕಲ್ಲಚ್ಚು ಪ್ರಕಾಶನ ಇದರ ಸಂಸ್ಥಾಪಕರಾದ ಕಲ್ಲಚ್ಚು ಮಹೇಶ್ ಆರ್. ನಾಯಕ್ ಇವರ ಅಧ್ಯಕ್ಷತೆಯಲ್ಲಿ ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷಟ್ಟಿನ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಸಂಧ್ಯಾರಾಣಿ ಟೀಚರ್ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಸಂಯೋಜಕರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಇದೇ ಸಂದರ್ಭದಲ್ಲಿ ಸಾಧಕರಿಗೆ ‘ಸಾಧಕಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಡಾ. ಸುರೇಶ್ ನೆಗಳಗುಳಿ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.