Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಬಂಗಾರ್ ಪರ್ಬದ ಸರಣಿ ವೈಭವೊ-6’ | ಆಗಸ್ಟ್ 18 ಮತ್ತು 19ರಂದು 
    News

    ‘ಬಂಗಾರ್ ಪರ್ಬದ ಸರಣಿ ವೈಭವೊ-6’ | ಆಗಸ್ಟ್ 18 ಮತ್ತು 19ರಂದು 

    August 15, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟ (ರಿ.) ಕುಡ್ಲ ಇದರ ‘ಬಂಗಾರ್ ಪರ್ಬದ ಸರಣಿ ವೈಭವೊ-6’ ಇದರ ಅಂಗವಾಗಿ ದಿನಾಂಕ 18-08-2023ರಂದು ‘ತುಳುವರೆ ಹಳ್ಳಿ ಗೊಬ್ಬುಲು’ ಹಾಗೂ ದಿನಾಂಕ 19-08-2023ರಂದು ‘ತುಳು ಪ್ರತಿಭಾ ಪುರಸ್ಕಾರ ಪ್ರದಾನ -2023’ ಈ ಎರಡೂ ಕಾರ್ಯಕ್ರಮಗಳು ಕೊಡ್ಮಾಣ್ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

    ದಿನಾಂಕ 18-08-2023ರಂದು ತುಳು ಕೂಟದ ಅಧ್ಯಕ್ಷರಾದ ಶ್ರೀ ಬಿ. ದಾಮೋದರ ನಿಸರ್ಗ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಡೆಯುವುದು. ಮಂಗಳೂರಿನ ಅಳಪೆಯಲ್ಲಿರುವ ಜ್ಞಾನ ವಿಕಾಸ ಕೇಂದ್ರದ ಸಂಯೋಜಕರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಸರಳಾ ಕುಲಾಲ್ ಇವರು ದೀಪ ಪ್ರಜ್ವಲನೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರಾದ ಶ್ರೀ ಬಿ. ಪದ್ಮನಾಭ ಕೋಟ್ಯಾನ್, ಮೇರಮಜಲು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಶ್ರೀ ಸತೀಶ ನಾಯಗ ಮತ್ತು ಕೊಡ್ಮಾಣ್ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಟಿ. ಭಾಸ್ಕರ್ ರಾವ್‌ ಭಾಗವಹಿಸಲಿದ್ದಾರೆ.

    ದಿನಾಂಕ 19-08-2023ರಂದು ಶ್ರೀ ಬಿ. ದಾಮೋದರ ನಿಸರ್ಗ ಇವರ ಅಧ್ಯಕ್ಷತೆಯಲ್ಲಿ ‘ತುಳು ಪ್ರತಿಭಾ ಪುರಸ್ಕಾರ ಪ್ರದಾನ -2023’ ನಡೆಯಲಿದೆ. ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಮಾಜಿ ಸದಸ್ಯರಾದ ಶ್ರೀ ಬಿ. ಪದ್ಮನಾಭ ಕೋಟ್ಯಾನ್ ಇವರು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಮೇರಮಜಲು ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಎಂ. ಕರ್ಕೇರ, ಉಪಾಧ್ಯಕ್ಷರಾದ ಶ್ರೀ ಪದ್ಮನಾಭ ಶೆಟ್ಟಿ ಹಾಗೂ ಕೊಡ್ಮಾಣ್ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಟಿ. ಭಾಸ್ಕರ್ ರಾವ್‌ ಭಾಗವಹಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಕೊಡ್ಮಾಣ್ ಸರಕಾರಿ ಪ್ರೌಢ ಶಾಲೆಯ ಕು.ಶುಭೀಕ್ಷಾ, ಉಡುಪಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಗಗನ್ ಜೆ. ಸುವರ್ಣ ಹಾಗೂ ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜಿನ ಮಾನಸ್ ಎಸ್. ಇವರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ‘ತುಳು ಪದರಂಗಿತೊ’.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಾ.ವಿನಾಯಕ ಕೃಷ್ಣ ಗೋಕಾಕ ಜನ್ಮ ದಿನಾಚರಣೆ
    Next Article ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯಿಂದ ‘ಸಮರಸ ಸಾಹಿತ್ಯದೊಂದಿಗೆ ಕುಟುಂಬೋತ್ಸವ’ 
    roovari

    Add Comment Cancel Reply


    Related Posts

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026

    ಸುಜ್ಞಾನ ಮಂಟಪದಲ್ಲಿ ‘ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ’ | ಜುಲೈ 7 ಮತ್ತು 8

    July 6, 2026

    ಪುಸ್ತಕ ವಿಮರ್ಶೆ | ಲಗುಬಗೆಯಲೋದಿಸುವ ಕು. ವಿ. ಕು. ಕವನಗಳು

    July 3, 2026

    ‘ಕಲಾಧಾರಾ–10’ ಯುವ ಪ್ರತಿಭೆಗಳ ಮನೋಜ್ಞ ನೃತ್ಯ – ಸಾಧಕ ಗುರುಗಳಿಗೆ ಅಪೂರ್ವ ಗೌರವ

    June 30, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.