ಮಂಗಳೂರು : ಕಲ್ಕೂರ ಪ್ರತಿಷ್ಠಾನವು ಆಯೋಜಿಸುತ್ತಿರುವ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆಯ ಅಂಗವಾಗಿ ಶ್ರೀ ಕೃಷ್ಣನ ಕುರಿತಾದ ‘ಸ್ವರಚಿತ ಬಹುಭಾಷಾ ಕವನ ರಚನಾ ಸ್ಪರ್ಧೆ’ಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರೌಢ ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ಮುಕ್ತ ವಿಭಾಗ ಹೀಗೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕನ್ನಡ, ತುಳು, ಸಂಸ್ಕೃತ, ಹಿಂದಿ, ಮಲಯಾಳ ಸಹಿತ ಯಾವುದೇ ಭಾಷೆಗಳ ಸ್ವರಚಿತ ಕವನಗಳನ್ನು ಕಳುಹಿಸಬಹುದು. ಸೆಪ್ಟಂಬರ್ 1ರೊಳಗಾಗಿ ಕವನಗಳನ್ನು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ವಾಟ್ಸಪ್ಪ್ ಮಾಡಬಹುದಾಗಿದೆ.
ಆಯ್ದ ಕವನಗಳನ್ನು ಮುದ್ರಿಸಿ ಶ್ರೀ ಕೃಷ್ಣ ವೇಷ ಸ್ಪರ್ಧೆಯ ದಿನದಂದು ಕೃತಿ ರೂಪದಲ್ಲಿ ಪ್ರಕಟಿಸಲಾಗುವುದು. ಕವನ ಕಳುಹಿಸಬೇಕಾದ ವಿಳಾಸ : ಶ್ರೀಮತಿ ಗೀತಾ ಲಕ್ಷ್ಮೀಶ್, ಶ್ರೀ ಕೃಷ್ಣ ಕವನ ಸ್ಪರ್ಧಾ ವಿಭಾಗ, ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು, 575003. ವಾಟ್ಸಪ್ ನಂ.9535656805.