ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಕವನ ರಚನಾ ಕಮ್ಮಟವು ದಿನಾಂಕ 01-11-2023ನೇ ಬುಧವಾರ ಪೂರ್ವಾಹ್ನ ಗಂಟೆ 10.00ಕ್ಕೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ನಡೆಯಲಿದೆ.
ಮಂಗಳೂರಿನ ಶ್ರೀ ಧ. ಮಂ. ಕಾನೂನು ಕಾಲೇಜು ಇದರ ಪ್ರಾಂಶುಪಾಲರಾದ ಡಾ. ತಾರನಾಥ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೇಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜು ಇದರ ಪ್ರಾಂಶುಪಾಲರುರಾದ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ರಾಜ್ಯೋತ್ಸವ ಸಂದೇಶ ನೀಡಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಲೇಖಕಿ ಶ್ರೀಮತಿ ಅಕ್ಷತಾರಾಜ್ ಪೆರ್ಲ ಭಾಗವಹಿಸಲಿದ್ದಾರೆ. ಕ. ಸಾ. ಪ ಬೆಂಗಳೂರಿನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಮಾಧವ ಎಂ. ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶ್ರೀ ಧ. ಮಂ. ಕಾನೂನು ಕಾಲೇಜು ಮಂಗಳೂರು ಇದರ ಪ್ರಾಧ್ಯಾಪಕರಾದ ಶ್ರೀ ಪುಷ್ಪರಾಜ ಕೆ. ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ದ.ಕ ಜಿಲ್ಲಾ ಕ.ಸಾ.ಪ ಇದರ ಅಧ್ಯಕ್ಷರು ಮತ್ತು ಸದಸ್ಯರು ಸರ್ವರಿಗೂ ಸ್ವಾಗತ ಬಯಸಿದ್ದಾರೆ.