ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಮಂಗಳೂರು, ಶ್ರೀ ಧಮಸ್ಥಳ ಮಂಜುನಾಥೇಶ್ವರ ತುಳುಪೀಠ, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ಮತ್ತು ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ವಂಡಾರು ಇವರ ಸಹಯೋಗದೊಂದಿಗೆ “ಗೇನದ ಗೆಜ್ಜೆ – ನೂದನೆ ಪಜ್ಜೆ’ ಹಾಗೂ ‘ತ್ರಿಂಶತಿ ತಿರುಳು’ ಮತ್ತು ‘ಅಪ್ಪೆ ಅಂಜನೆ’ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ :01-06-2023ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ಒಡಿಯೂರಿನ ಶ್ರೀ ಗುರುದೇವದತ್ತ ಸಂಸ್ಥಾನಮ್ ಇಲ್ಲಿಯ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಮಂಗಳೂರು ವಿ.ವಿ.ಯ ಗೌರವಾನ್ವಿತ ಕುಲಪತಿಯಾದ ಪ್ರೊ. ಪಿ.ಎಸ್. ಯಡಪಡಿತ್ತಾಯ ಇವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರಿನ ವಿ.ವಿ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀದೇವಿ ಎಲ್., ವಂಡಾರಿನ ಎನ್.ವೈ.ಟಿ.ಯ ಸ್ಥಾಪಕ್ಷಾಧ್ಯಕ್ಷರಾದ ಶ್ರೀ ಗೋವಿಂದ ವಂಡಾರು, ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇದರ ವ್ಯವಸ್ಥಾಪಕರಾದ ಶ್ರೀ ಸುರೇಂದ್ರ ಮಲ್ಲಿ ಹಾಗೂ ಶ್ರೀ ಧಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಲಹಾ ಮಂಡಳಿಯ ಸದಸ್ಯರಾದ ಶ್ರೀ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಶ್ರೀ ಪ್ರವೀಣ್ ಕುಮಾರ್ ಇಂದ್ರ, ಶ್ರೀ ಮೋಹನ್ ಪಡಿವಾಳ್, ಶ್ರೀಮತಿ ರಾಜಶ್ರೀ ಎಸ್. ಹೆಗ್ಡೆ ಇವರುಗಳ ಗೌರವ ಉಪಸ್ಥಿತಿಯಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ನಂತರ ಒಡಿಯೂರಿನ ‘ಜೈ ಗುರುದೇವ ಕಲಾಕೇಂದ್ರ’ದ ಮಕ್ಕಳಿಂದ ‘ಜಾನಪದ ನಲಿಕೆ’ ಹಾಗೂ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀಮತಿ ಶುಭಾಶಯ ಜೈನ್ ವಿರಚಿತ ‘ಅಪ್ಪೆ ಅಂಜನೆ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀದೇವಿ ಎಲ್., ಶ್ರೀ ಧಮಸ್ಥಳ ಮಂಜುನಾಥೇಶ್ವರ ತುಳುಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕರಾದ ಡಾ. ಮಾಧವ ಎಂ.ಕೆ. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಆರ್. ಜಯಲಕ್ಷ್ಮಿ ಶೆಟ್ಟಿ ಮತ್ತು ಶ್ರೀಮತಿ ಶುಭಾಶಯ ಜೈನ್ ಇವರೆಲ್ಲರೂ ತಮಗೆ ಪ್ರೀತಿಯ ಸ್ವಾಗತವನ್ನು ಕೋರಿದ್ದಾರೆ.