ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿಯು ಗೋವಿಂದ ಪೈ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಖ್ಯಾತ ಅನುವಾದಕ ಮತ್ತು ಬರಹಗಾರ ಕೆ. ವಿ. ಕುಮಾರನ್ ಮಾಸ್ತರ್ ಆಯ್ಕೆಯಾಗಿದ್ದಾರೆ.
ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಸಮಗ್ರ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕುಮಾರನ್ ಮಾಸ್ತರ್ ಅವರಿಗೆ ಕೇಂದ್ರ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಇತ್ತೀಚೆಗೆ ಲಭಿಸಿದ್ದವು.
23 ಮಾರ್ಚ್ 2025ರಂದು ಬೆಳಗ್ಗೆ 10 ಗಂಟೆಗೆ ಗಿಳಿವಿಂಡುವಿನಲ್ಲಿ ನಡೆಯುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಇವರು ಪ್ರಶಸ್ತಿ ಪ್ರದಾನ ಮಾಡುವರು. ಈ ಪ್ರಶಸ್ತಿಯು ರೂಪಾಯಿ 5,000 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿದೆ ಎಂದು ಸ್ಮಾರಕ ಸಮಿತಿ ಕಾರ್ಯದರ್ಶಿ ಉಮೇಶ್ ಎಂ .ಸಾಲಿಯಾನ್ ತಿಳಿಸಿದ್ದಾರೆ.
ಸಮಾರಂಭವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಲಿದ್ದು, ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ಅಧ್ಯಕ್ಷತೆ ವಹಿಸಲಿರುವರು. ಕಾಸರಗೋಡು ಶಾಸಕ ಎನ್. ಎ. ನೆಲ್ಲಿಕುನ್ನು, ಸಮಿತಿ ಕಾರ್ಯದರ್ಶಿ ಉಮೇಶ್ ಎಂ. ಸಾಲಿಯಾನ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಭಾಗವಹಿಸುವರು.
Subscribe to Updates
Get the latest creative news from FooBar about art, design and business.
ಬರಹಗಾರ ಕೆ. ವಿ. ಕುಮಾರನ್ ಮಾಸ್ತರ್ ಇವರಿಗೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಪ್ರಶಸ್ತಿ
No Comments1 Min Read