ಉಡುಪಿ : ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 09 ನವೆಂಬರ್ 2024ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ “ಯಕ್ಷಗಾನ ಕಲೆಗೆ ಪ್ರಾಚೀನ ಇತಿಹಾಸವಿದೆ. ಅದು ಬೆಳೆದುಬಂದ ಬಗೆ ನಿಜಕ್ಕೂ ಆಶ್ಚರ್ಯ ತರುತ್ತಿದೆ. ಇಂದು ಯಕ್ಷಗಾನ ಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಇದೆ. ಶಾಲಾ ಕಾಲೇಜುಗಳಲ್ಲಿಯೂ ಮಕ್ಕಳು ಅದರಲ್ಲಿ ಭಾಗವಹಿಸುವುದನ್ನು ನೋಡಿದರೆ ಮುಂದೆ ಅದು ಇನ್ನೂ ಹೆಚ್ಚು ಜನಪ್ರಿಯವಾಗಲಿದೆ. ಈ ನಿಟ್ಟಿನಲ್ಲಿ ಉಡುಪಿಯ ಇಂದ್ರಾಳಿಯ ಯಕ್ಷಗಾನ ಕೇಂದ್ರ ಕಲೆಯ ಪ್ರೋತ್ಸಾಹಕ್ಕೆ ಶ್ರಮಿಸುತ್ತಿದೆ. ಯಕ್ಷಗಾನ ಕೇಂದ್ರಕ್ಕೆ ಮಾಹೆಯ ಬೆಂಬಲ ನಿರಂತರವಾಗಿ ಇದೆ. ಪರಂಪರೆಯ ಯಕ್ಷಗಾನ ಕಲೆಗೆ ಜನ ಬೆಂಬಲ ನೀಡಬೇಕು.” ಎಂದು ಹೇಳಿದರು.
ಮಾಹೆಯ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಸಮಾರಂಭವನ್ನು ಉದ್ಘಾಟಿಸಿದರು. 2024ನೇ ಸಾಲಿನ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷಧಾರಿ ಎಳ್ಳಂಪಳ್ಳಿ ಜಗನ್ನಾಥ ಆಚಾರಿ ಮಾತನಾಡಿ ಗುರುವೀರಭದ್ರ ನಾಯಕರ ಶಿಷ್ಯನಾಗಿ ತಾನು ಪಡೆದುಕೊಂಡ ಅನುಭವ ಹಾಗೂ ಡಾ.ಕೋಟ ಶಿವರಾಮ ಕಾರಂತರ ಪ್ರೋತ್ಸಾಹವನ್ನು ಸ್ಮರಿಸಿದರು.
ಗುರು ಉಮೇಶ್ ಸುವರ್ಣ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ ಪ್ರವರ್ತಕರಾದ ಡಾ. ಜಿ. ಶಂಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಜ್ವಲ್ ಡೆವಲಪ್ಪರ್ಸ್ ಇದರ ಪ್ರವರ್ತಕರಾದ ಪುರುಷೋತ್ತಮ ಶೆಟ್ಟಿ ಹಾಗೂ ಪೆರ್ಡೂರು ಮೇಳದ ಯಜಮಾನರಾದ ಶ್ರೀ ಕರುಣಾಕರ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕೇದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಪಳ್ಳಿ ಕಿಶನ್ ಹೆಗ್ಡೆ ಅವರು ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿ, ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸಲಹಾಸಮಿತಿ ಸದಸ್ಯರಾದ ಭುವನ ಪ್ರಸಾದ ಹೆಗ್ಡೆ ವಂದಿಸಿದರು.
Subscribe to Updates
Get the latest creative news from FooBar about art, design and business.
ಎಳ್ಳಂಪಳ್ಳಿ ಜಗನ್ನಾಥ ಆಚಾರಿ ಇವರಿಗೆ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ
Previous Articleಪ್ರಾಧ್ಯಾಪಕ, ಲೇಖಕ ಹಾಗೂ ಹಿರಿಯ ಪತ್ರಕರ್ತ ಪ್ರೊ. ಪಿ. ಕೆ. ಮೊಯ್ಲಿ ನಿಧನ
Next Article ಪ್ರಶಸ್ತಿಗೆ ಕೃತಿಗಳ ಆಹ್ವಾನ | ಡಿಸೆಂಬರ್ 25