ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ವತಿಯಿಂದ ಮನೆಯಂಗಳದಲ್ಲಿ ‘ಮಾತುಕತೆ -240’ ಕಾರ್ಯಕ್ರಮವನ್ನು ದಿನಾಂಕ 16 ಆಗಸ್ಟ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಾಹಿತಿ ಹಾಗೂ ಚಿಂತಕರಾದ ಪ್ರೊ. ಕಾಳೇಗೌಡ ನಾಗವಾರ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ.ಎಂ. ಗಾಯತ್ರಿ ಇವರು ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.