ಮಂಗಳೂರು: ಕೇಂದ ಸರ್ಕಾರದ ಸಂಸ್ಕೃತಿ ಸಚಿವಾಲಯದಡಿ ಬರುವ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಲಹಾ ಸಮಿತಿಗೆ ಮ೦ಗಳೂರಿನ ಕೊಂಕಣಿ ಕವಿ ಮೆಲ್ವಿನ್ ರೊಡ್ರಿಗಸ್ ನೇಮಕಗೊಂಡಿದ್ದಾರೆ.
ಈ ವಲಯದಲ್ಲಿ ಗುಜರಾತಿ, ಮರಾಠಿ, ಸಿಂಧಿ ಮತ್ತು ಕೊಂಕಣಿ ಭಾಷೆಳಿದ್ದು, ಮೆಲ್ವಿನ್ ಅವರು ಕೊಂಕಣಿ ಭಾಷಾ ಸಲಹಾ ಸಮಿತಿ ಮುಖ್ಯಸ್ಥರಾಗಿದ್ದಾರೆ.
ಕವಿತಾ ಟ್ರಸ್ಟ್ ಇದರ ಸ್ಥಾಪಕರಾಗಿರುವ ಮೆಲ್ವಿನ್ ಕೊಂಕಣಿ ಕಾವ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಾ ಬಂದಿದ್ದಾರೆ. ಆರು ಕವನ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಮೂರು ಭಾಷಾಂತರಗೊಂಡ ಕೃತಿಗಳು, ಆರು ಸಂಪಾದಿತ ಕೃತಿಗಳು, ಒಂದು ನೀಳ್ಗತೆ ಸೇರಿ ಸುಮಾರು 34 ಕೃತಿಗಳನ್ನು ಪ್ರಕಟಿಸಿದ್ದಾರೆ. ಕೊಂಕಣಿ ಕಾವ್ಯಕ್ಕೆ ಸಂಬಂಧಿಸಿದಂತೆ ಸುಮಾರು 220 ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಇವರ ಕೊಂಕಣಿ ಹಾಡುಗಳ ಧ್ವನಿ ಸುರುಳಿಗಳೂ ಬಿಡುಗಡೆಗೊಂಡಿವೆ.