ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ನಡೆಯುವ ‘ತಿಂಗಳ ನಾಟಕ ಸಂಭ್ರಮ’ದ ಕಾರ್ಯಕ್ರಮವನ್ನು ದಿನಾಂಕ 21 ಫೆಬ್ರವರಿ 2026ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತ ರಾವ್ ಪಾಟೀಲ್ ಇವರು ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿಯವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಸನ ಜಂಜೂರು ಇಲ್ಲಿನ ಶ್ರೀ ಕೋಟೆಮಾರಮ್ಮ ಮಹಿಳಾ ಕಲಾತಂಡ (ರಿ.) ಇವರಿಂದ ಮಹಿಳೆಯರು ಅಭಿನಯಿಸುವ ‘ಕುರುಕ್ಷೇತ್ರ’ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.

