ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಿಂಗಳ ಸರಣಿ ಪ್ರಯುಕ್ತ ತಾಳಮದ್ದಳೆ ಕೂಟ ಶ್ರೀ ಗಣೇಶ್ ಕೊಲೆಕ್ಕಾಡಿ ವಿರಚಿತ ‘ಸಮರ ಸೌಗಂಧಿಕಾ’ ಎಂಬ ಆಖ್ಯಾನದೊಂದಿಗೆ ದಿನಾಂಕ 02 ಮಾರ್ಚ್ 2026ರಂದು ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ನಿತೀಶ್ ಮನೋಳಿತ್ತಾಯ ಹಾಗೂ ಚೆಂಡೆ, ಮದ್ದಳೆಗಳಲ್ಲಿ ಪದ್ಯಾಣ ಜಯರಾಮ ಭಟ್, ಮುರಳೀಧರ ಕಲ್ಲೂರಾಯ ಕುಂಜೂರು ಪಂಜ, ಶಿವಪ್ರಸಾದ್ ನಾಕೂರು, ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಗುಂಡ್ಯಡ್ಕ ಈಶ್ವರ ಭಟ್ (ಭೀಮ), ಭಾಸ್ಕರ ಬಾರ್ಯ (ದ್ರೌಪದಿ), ಭಾಸ್ಕರ ಶೆಟ್ಟಿ ಸಾಲ್ಮರ (ಹನೂಮಂತ), ದುಗ್ಗಪ್ಪ ನಡುಗಲ್ಲು (ಕುಬೇರ), ಕಿಶೋರಿ ದುಗ್ಗಪ್ಪ ನಡುಗಲ್ಲು (ಚರ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಗೌರವ ಕಾರ್ಯದರ್ಶಿ ರಂಗನಾಥ ರಾವ್ ಸಹಕರಿಸಿದರು.
