ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ಕೂಟ ಪಾರ್ತಿಸುಬ್ಬ ವಿರಚಿತ ‘ಪಾದುಕಾ ಪ್ರದಾನ’ ಎಂಬ ಆಖ್ಯಾನದೊಂದಿಗೆ ದಿನಾಂಕ 19 ಮೇ 2026ನೇ ಮಂಗಳವಾರ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಆನಂದ ಸವಣೂರು, ಸತೀಶ್ ಇರ್ದೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪದ್ಯಾಣ ಜಯರಾಮ ಭಟ್, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಗುಡ್ಡಪ್ಪ ಬಲ್ಯ ಮತ್ತು ಮಾಂಬಾಡಿ ವೇಣುಗೋಪಾಲ್ ಭಟ್ (ಶ್ರೀ ರಾಮ), ಭಾಸ್ಕರ ಬಾರ್ಯ (ಭರತ), ಬಡೆಕ್ಕಿಲ ಚಂದ್ರಶೇಖರ ಭಟ್ (ಲಕ್ಷ್ಮಣ), ಹರಿಣಾಕ್ಷಿ ಜೆ. ಶೆಟ್ಟಿ (ವಸಿಷ್ಠ), ಕಿಶೋರಿ ದುಗ್ಗಪ್ಪ ನಡುಗಲ್ಲು (ಗುಹ) ಸಹಕರಿಸಿದರು. ರಾಜಗೋಪಾಲ್ ಭಟ್ ಬನ್ನೂರು ಪ್ರಾಯೋಜಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀ ದೇವಳದ ವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.

