Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪ ಕೊಟ್ಟ ಎಂ.ಆರ್.ಶ್ರೀನಿವಾಸ ಮೂರ್ತಿಯವರ ಜನ್ಮದಿನಾಚರಣೆ
    Literature

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪ ಕೊಟ್ಟ ಎಂ.ಆರ್.ಶ್ರೀನಿವಾಸ ಮೂರ್ತಿಯವರ ಜನ್ಮದಿನಾಚರಣೆ

    August 30, 2023Updated:August 31, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿ ಎಂ.ಆರ್.ಶ್ರೀನಿವಾಸ ಮೂರ್ತಿಯವರ 131ನೆಯ ಜನ್ಮದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದಿನಾಂಕ 28-08-2023ರಂದು ಆಚರಿಸಲಾಯಿತು.

    ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು ಇವರು ಪುಷ್ಪನಮನ ಸಲ್ಲಿಸಿ ಮಾತನಾಡುತ್ತಾ “ಹೊಸ ಗನ್ನಡ ಸಾಹಿತ್ಯಕ್ಕೆ ಸೂಕ್ತ ವೇದಿಕೆ ರೂಪಿಸಿದ ಶ್ರೀ ಎಂ.ಆರ್.ಶ್ರೀನಿವಾಸ ಮೂರ್ತಿಯವರು ಕನ್ನಡ ಸಾಹಿತ್ಯ ಪರಿಷತ್ತಿಗೂ ಮಹತ್ವದ ಕೊಡುಗೆಯನ್ನು ನೀಡಿದರು. ಎಂ.ಆರ್.ಶ್ರೀಯವರು ಕನ್ನಡ ಸಾಹಿತ್ಯದ ಪರಂಪರೆಯ ಬಗ್ಗೆ ಅದರಲ್ಲಿಯೂ ವೀರಶೈವ ಸಾಹಿತ್ಯದ ಬಗ್ಗೆ ಅಧಿಕಾರಯುತವಾಗಿ ಮಾತನಾಡಬಲ್ಲವರಾಗಿದ್ದರು. ಅವರು ವಿಜ್ಞಾನದ ವಿದ್ಯಾರ್ಥಿಯಾದರೂ ಕನ್ನಡದ ಆಕರ್ಷಣೆಗೆ ಒಳಗಾಗಿ ಕನ್ನಡ ಸಾಹಿತ್ಯದಲ್ಲಿ ಪ್ರಭುತ್ವವನ್ನು ಪಡೆದಿದ್ದರು. ವೀರಶೈವ ಸಾಹಿತ್ಯ, ಅದರಲ್ಲೂ ವಚನ ಸಾಹಿತ್ಯಕ್ಕೆ ಎಂ.ಆರ್.ಶ್ರೀ ಅವರದು ಬೆಲೆಯುಳ್ಳ ಕಾಣಿಕೆ. ‘ವಚನಧರ್ಮಸಾರ’ ಅವರ ಆಳವಾದ ವ್ಯಾಸಂಗಕ್ಕೆ, ವಿದ್ವತ್ತಿಗೆ, ಹೊಸದಾದ ಆಲೋಚನೆಗಳಿಗೆ ಸಂಕೇತವಾಗಿದೆ..’ರಂಗಣ್ಣನ ಕನಸಿನ ದಿನಗಳು’ ಶ್ರೀಯುತರ ಮಹತ್ವದ ಕೃತಿ. ಇದನ್ನು ಕುವೆಂಪು ಅವರು ‘ಚಿತ್ರಕಾವ್ಯ’ ಎಂದು ಕರೆದಿದ್ದಾರೆ. ‘ನಾಗರೀಕ’ ‘ಧರ್ಮದುರಂತ’ ‘ಕಂಠೀರವ ವಿಜಯ’ ಅವರ ಪ್ರಮುಖ ನಾಟಕಗಳಾಗಿದ್ದು, ಸಾವಿತ್ರಿ ಮತ್ತು ಮಹಾತ್ಯಾಗ ಅವರ ಪ್ರಮುಖ ಕಾದಂಬರಿಗಳು. ‘ಮಹಾತ್ಯಾಗ’ ಚಲನಚಿತ್ರವೂ ಆಗಿದೆ. ಎಂ.ಆರ್.ಶ್ರೀಯವರ ಬರಹಗಳಲ್ಲಿ ಮಹಿಳಾ ಕಾಳಜಿಯನ್ನು ನೋಡಬಹುದು” ಎಂದು ಹೇಳಿದ ಪದ್ಮಿನಿ ನಾಗರಾಜು ಅವರು ‘ನೀವು ನನಗೆ ಗಂಡನಲ್ಲ’ ಎಂಬ ಎಂ.ಆರ್.ಶ್ರೀಯವರ ಕವಿತೆಯನ್ನು ಭಾವಪೂರ್ಣವಾಗಿ ಓದಿ ನಮನಗಳನ್ನು ಸಲ್ಲಿಸಿದರು.

    ಎಂ.ಆರ್.ಶ್ರೀಯವರು ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಿದ ಕೊಡುಗೆಗಳನ್ನು ವಿವರಿಸಿದ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರಮೂರ್ತಿಯವರು “ನಮ್ಮ ನಾಡಿನಲ್ಲಿಯೇ ಮೊಟ್ಟ ಮೊದಲು ಪುಸ್ತಕೋತ್ಸವವನ್ನು ಏರ್ಪಡಿಸಿದವರು ಎಂ.ಆರ್.ಶ್ರೀಯವರು. 1934ರಲ್ಲಿ ಅವರು ಈ ಉತ್ಸವವನ್ನು ಏರ್ಪಡಿಸಿದಾಗ 1901ರಿಂದ ಅಲ್ಲಿಯವರೆಗೆ ಪ್ರಕಟವಾದ ಎಲ್ಲಾ ಪುಸ್ತಕಗಳು ಪ್ರದರ್ಶಿತವಾಗಿದ್ದವು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಇಂಗ್ಲೀಷ್ ನಿಘಂಟಿಗೆ ಅಂತಿಮ ರೂಪವನ್ನು ನೀಡಿದವರು ಅವರು. ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಕರ್ನಾಟಕದಿಂದ ಹೊರಗೆ ಘಟಕಗಳನ್ನು ಸ್ಥಾಪಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದ್ದರು. ಹೈದರಬಾದಿನ ಘಟಕ ಅವರ ಕಾಲದಲ್ಲಿಯೇ ಆರಂಭವಾಯಿತು. ಮುಂಬೈ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಕವಿ ಗೋವಿಂದ ಪೈಯವರು ಅಧ್ಯಕ್ಷರಾಗುವಲ್ಲಿ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಗಮಕ ಕಲೆಗೆ ವಿಶೇಷ ಪ್ರೋತ್ಸಾಹ ನೀಡಿದ ಅವರು ಪ್ರತಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗಮಕ ಕಾರ್ಯಕ್ರಮವನ್ನು ಏರ್ಪಡಿಸುತ್ತಿದ್ದರು. ಕನ್ನಡದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದ ಅವರು ಸೊಲ್ಲಾಪುರ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡವನ್ನು ಕಟ್ಟುವ ಬಗ್ಗೆ ಮತ್ತು ಶಿಕ್ಷಣದ ಪ್ರತಿ ಹಂತದಲ್ಲಿಯೂ ಕನ್ನಡವನ್ನು ಅಳವಡಿಸುವ ಬಗ್ಗೆ ನೀಡಿದ ಸಲಹೆಗಳನ್ನು ವಿವರಿಸಿದರು. ಪರಿಷತ್ತಿನ ಮೂಲಕ ಕರ್ನಾಟಕ ಏಕೀರಣಕ್ಕೆ ಶ್ರೀಯುತರು ಮಹತ್ವದ ಕೊಡುಗೆಯನ್ನು ನೀಡಿದ್ದರು. ಇಂಟರ್ ಮೀಡಿಯಟ್ ನಂತರ ಕನ್ನಡವನ್ನು ಕೈ ಬಿಡುವ ನಿರ್ಧಾರವನ್ನು ಮೈಸೂರು ವಿಶ್ವವಿದ್ಯಾಲಯ ತೆಗೆದುಕೊಂಡಾಗ ಅವರು ಸಂಘಟಿಸಿದ ಉಗ್ರ ಹೋರಾಟವನ್ನು ನೆನಪಿಸಿಕೊಂಡ ಪ್ರೊ.ಎನ್.ಎಸ್.ಶ್ರೀಧರಮೂರ್ತಿ ಈಗ ಎಂ.ಆರ್.ಶ್ರೀಯವರ ಮಾದರಿ ಅಗತ್ಯವಾಗಿದೆ” ಎಂದರು.
    ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು ಹಾಗೂ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಪರಿಷತ್ತಿನ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ, ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ. ಎನ್.ಎಸ್.ಶ್ರೀಧರ ಮೂರ್ತಿ, ವಿಶೇಷ ಕರ್ತವ್ಯಾಧಿಕಾರಿ ಶ್ರೀ ಚಿಕ್ಕತಿಮ್ಮಯ್ಯ ಸಿ. ಹಾಗೂ ಸಿಬ್ಬಂದಿಗಳು ಎಂ.ಆರ್.ಶ್ರೀನಿವಾಸ ಮೂರ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಡಿಕೇರಿಯಲ್ಲಿ ದೇಸಿ ಜಗಲಿ ಉಚಿತ ಕಥಾ ಶಿಬಿರಕ್ಕೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    Next Article ಮಂಗಳೂರು ವಿವಿಯಲ್ಲಿ ‘ಲೇಖ ಲೋಕ -9’ ಉದ್ಘಾಟನೆ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications