ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2025ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ. ಡಿ. ಎ. ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆ. ಎಂದು ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು 28ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ ಪೀಳಿಗೆಯ ವಿಮರ್ಶಕರಾದ ವಿಕಾಸ ಹೊಸಮನಿ ಹಾವೇರಿ ಹಾಗೂ ಡಾ. ಸುಭಾಷ್ ಪಟ್ಟಾಜೆ, ಕಾಸರಗೋಡು ಅವರು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ.
1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಫೆಬ್ರವರಿ ತಿಂಗಳಲ್ಲಿ ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರ ನೇತೃತ್ವದಲ್ಲಿ ನೆರವೇರಲಿರುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
					 Previous Article‘ನೃತ್ಯ ಧಾರಾ’ ಮತ್ತು ‘ಕಲಾನಯನ’ ಪ್ರಶಸ್ತಿ ಪ್ರದಾನ ಸಮಾರಂಭ | ನವೆಂಬರ್ 01
				
				
	 
									 
					