ಮುಧೋಳ : ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.) ಕರ್ನಾಟಕ ಮತ್ತು ಕನ್ನಡ ಸಾಹಿತ್ಯ ಪರಿಷತ್ತು, ವಚನ ಸಾಹಿತ್ಯ ಪರಿಷತ್ತು ಹಾಗೂ ಫ.ಗು. ಹಳಕಟ್ಟಿ ಪ್ರತಿಷ್ಠಾನ ಮುಧೋಳ ಇವರ ಸಂಯುಕ್ತ ಆಶ್ರಯದಲ್ಲಿ ‘ಮುಧೋಳ ಕವಿ-ಕಾವ್ಯ ಸಮ್ಮೇಳನ ಹಾಗೂ ರತ್ನ ಸನ್ಮಾನ 2026’ ಸಮಾರಂಭವನ್ನು ದಿನಾಂಕ 20 ಸೆಪ್ಟೆಂಬರ್ 2026ರಂದು ಬೆಳಿಗ್ಗೆ 10-00 ಗಂಟೆಗೆ ಮುಧೋಳ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೃತಿ ಬಿಡುಗಡೆ, ವಿಚಾರ ಗೋಷ್ಠಿ, ಕವಿ ಗೋಷ್ಠಿ, ಸಾಂಸ್ಕೃತಿಕ, ಅತ್ಯುತ್ತಮ ಆದರ್ಶ ಶಾಲಾ ರಾಜ್ಯ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ರತ್ನ ಪ್ರಶಸ್ತಿ ಪ್ರದಾನ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

