ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ -2025’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 22 ಫೆಬ್ರವರಿ 2025ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜು ಆವರಣದ ದ್ವನ್ಯಾಲೋಕ ಆರ್.ಆರ್.ಸಿ.ಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸುಮೊ ಇವರಿಗೆ ಪ್ರಶಸ್ತಿ ಪ್ರದಾನ ಮಾಡುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರು ವಹಿಸಲಿದ್ದು, ವಿಶ್ರಾಂತ ಪ್ರಾಂಶುಪಾಲರು ಹಾಗೂ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಪ್ರೊ. ಎಂ.ಎಲ್. ಸಾಮಗ ಇವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ದಿ. ಮನೋರಮಾ ಭಟ್ ಇವರ ‘ಆಡಿಯೋ ನಾಟಕಗಳು’ ಮಟ್ಟು ‘ಸ್ವಯಂವರ’ ಎಂಬ ಕೃತಿಗಳ ಬಿಡುಗಡೆಗೊಳ್ಳಲಿದೆ.