ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವು ದಿನಾಂಕ 17 ಜನವರಿ 2026ರ ಶನಿವಾರದಂದು ಬೆಳಗ್ಗೆ 10-30 ಗಂಟೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಈ ವರ್ಷದ ಪ್ರಶಸ್ತಿಯನ್ನು ಹಿರಿಯ ಲೇಖಕಿ ಡಾ. ಗಿರಿಜಾ ಶಾಸ್ತ್ರಿಯವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಳಿಯ ಪ್ರಶಸ್ತಿ ಸಮಿತಿಯ ಅಧ್ಯಕ್ಷರಾದ ಡಾ. ನಾ. ದಾಮೋದರ ಶೆಟ್ಟಿ ವಹಿಸಲಿದ್ದು, ಡಾ. ಬಿ.ಎ. ವಿವೇಕ ರೈ ಪ್ರಶಸ್ತಿ ಪ್ರದಾನ ಮಾಡಲಿರುವರು. ಮಂಗಳೂರಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಸರಸ್ವತಿ ಅಭಿನಂದನಾ ಭಾಷಣ ಮಾಡಲಿದ್ದು, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಉಪಸ್ಥಿತರಿರುವರು.

