ಉಡುಪಿ : ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು (ರಿ.), ಉಡುಪಿ ಇದರ ವತಿಯಿಂದ ಡಾ. ನಿ. ಮುರಾರಿ ಬಲ್ಲಾಳ್ ಮತ್ತು ಪ್ರೊ. ಕೆ.ಎಸ್. ಕೆದ್ಲಾಯ ನೆನಪಿನ ‘ಮುರಾರಿ-ಕೆದ್ಲಾಯ ರಂಗೋತ್ಸವ’ವನ್ನು ದಿನಾಂಕ 15 ಫೆಬ್ರವರಿ 2025ರಿಂದ 17 ಫೆಬ್ರವರಿ 2025ರವರೆಗೆ ಪ್ರತಿದಿನ ಗಂಟೆ 6-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಡಾ. ಎನ್. ಮುರಾರಿ ಬಲ್ಲಾಳ್ ಚಿಂತನ ಫೌಂಡೇಶನ್ (ರಿ.) ಅಂಬಲಪಾಡಿ ಇವರ ಸಹಕಾರದೊಂದಿಗೆ ನಡೆಯಲಿದೆ.
ದಿನಾಂಕ 15 ಫೆಬ್ರವರಿ 2025ರಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತರಾದ ಶ್ರೀ ಮುನೀರ್ ಕಾಟಿಪಳ್ಳ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮತ್ತು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ದಿನಾಂಕ 15 ಫೆಬ್ರವರಿ 2025ರಂದು ಹುಲುಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ಸಂಕಲ್ಪ ಮೈಸೂರು ತಂಡದವರು ಅಭಿನಯಿಸುವ ನಾಟಕ ‘ಜತೆಗಿರುವನು ಚಂದಿರ’, ದಿನಾಂಕ 16 ಫೆಬ್ರವರಿ 2025ರಂದು ಕೆ.ಪಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಜಂಗಮ ಕಲೆಕ್ಟಿವ್ ತಂಡದವರು ಅಭಿನಯಿಸುವ ನಾಟಕ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ಮತ್ತು ದಿನಾಂಕ 17 ಫೆಬ್ರವರಿ 2025ರಂದು ರೋಹಿತ್ ಎಸ್. ಬೈಕಾಡಿ ಇವರ ನಿರ್ದೇಶನದಲ್ಲಿ ಮಂದಾರ (ರಿ.) ಬೈಕಾಡಿ ಇವರು ‘ಬೆತ್ತಲಾಟ’ ಎಂಬ ನಾಟಕ ಪ್ರದರ್ಶನ ನೀಡಲಿರುವರು.