Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಭರತಾಂಜಲಿಯಿಂದ ಗಣೇಶಪುರದಲ್ಲಿ ಗಾನಮೃತ ಮತ್ತು ನೃತ್ಯ ವೈಭವ
    Bharathanatya

    ಭರತಾಂಜಲಿಯಿಂದ ಗಣೇಶಪುರದಲ್ಲಿ ಗಾನಮೃತ ಮತ್ತು ನೃತ್ಯ ವೈಭವ

    April 24, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಭರತಾಂಜಲಿ ನೃತ್ಯಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಗಣೇಶಪುರ ದೇವಳದ ವಠಾರದಲ್ಲಿ ಹಮ್ಮಿಕೊಂಡಿರುವ ಗಾನಾಮೃತ ಹಾಗೂ ಭರತನಾಟ್ಯ ವೈಭವ ಕಾರ್ಯಕ್ರಮವು ದಿನಾಂಕ 22 ಏಪ್ರಿಲ್ 2026ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಧರ್ಮೇಂದ್ರ ಇವರು ಮಾತನಾಡಿ “ಭರತನಾಟ್ಯವು ಕೇವಲ ಒಂದು ನೃತ್ಯ ಪ್ರಕಾರವಲ್ಲ, ಅದೊಂದು ಜೀವನ ವಿಧಾನ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ. ಜೀವನ ಮೌಲ್ಯಗಳನ್ನು ಕಲಿಸುವ, ಶಿಸ್ತು ಮೂಡಿಸುವ ಮತ್ತು ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಅದ್ಭುತ ಕಲೆಯಾಗಿದೆ. ಭರತಾಂಜಲಿ ಸಂಸ್ಥೆಯ ರೂವಾರಿಗಳಾದ ಶ್ರೀಧರ ಹೊಳ್ಳ ಪ್ರತಿಮಾ ದಂಪತಿಗಳು ಮಹಾಗಣಪತಿ ದೇವಸ್ಥಾನದ ಪ್ರಾರಂಭದಿಂದಲೂ ಕಲಾ ಸೇವೆಯನ್ನು ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ” ಎಂದು ನುಡಿದರು.

    ಭರತಾಂಜಲಿಯ ನಿರ್ದೇಶಕ ಗುರು ಶ್ರೀಧರ ಹೊಳ್ಳ ಪ್ರಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯು ಬೆಳೆದು ಬಂದ ಬಗ್ಗೆ ವಿವರಿಸಿದರು. ಸಾಂಸ್ಕೃತಿಕ ಸಮಿತಿಯ ಚಂದ್ರಹಾಸ ಶೆಟ್ಟಿಗಾರ್ ಸ್ವಾಗತಿಸಿ, ನಿರೂಪಿಸಿದರು. ವಿದುಷಿ ಪ್ರತಿಮಾ ಶ್ರೀಧರ್ ವಂದಿಸಿದರು. ದೀನನಾಥ ಶೆಟ್ಟಿಗಾರ್, ರಾಮಚಂದ್ರ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು. ಬೆಂಗಳೂರಿನ ವಂದನಾ ರಾಣಿ ಇವರಿಂದ ಗಾನಮೃತ ಹಾಗೂ ಸಿದ್ದಿ ವಿನಾಯಕ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಕಾರ್ಯಕ್ರಮ ಸಂಪನ್ನಗೊಂಡಿತು.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಯಶಸ್ವಿಯಾಗಿ ನೆರವೇರಿದ ‘ರಾಗ ಸಂಧ್ಯಾ’ ಭಕ್ತಿ ಸಂಗೀತ ಕಾರ್ಯಕ್ರಮ
    Next Article ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 10
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.