ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 07 ಮಾರ್ಚ್ 2026ರಂದು ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ 5-00 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಶ್ರೀವಸ್ ಎಸ್., ವಿಕ್ರಮ್ ಎಸ್. ಮತ್ತು ಶ್ಯಾಮ್ ಪ್ರಮೋದ್ ಯು.ಎನ್. ಇವರ ಹಾಡುಗಾರಿಕೆಗೆ ವಿಜೇತಾ ಸುಬ್ರಹ್ಮಣ್ಯ ವಯೋಲಿನ್ ಮತ್ತು ಸಂಧೀಪ್ ರಾಮಮೂರ್ತಿ ಮೃದಂಗಂನಲ್ಲಿ ಸಾಥ್ ನೀಡಲಿದ್ದಾರೆ. ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆ ಮಹತಿ ಎಚ್. ಪಾವನಸ್ಕರ್ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ಎನ್.ಐ.ಟಿ.ಕೆ. ಡೀನ್ ಪ್ರೊ. ಮಂಡೇಲ ಗೋವಿಂದ ರಾಜ್ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

