ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತನಾಟ್ಯ ಕಾರ್ಯಕ್ರಮವನ್ನು ದಿನಾಂಕ 25 ಏಪ್ರಿಲ್ 2026ರಂದು ಸುರತ್ಕಲ್ಲಿನ ನಾಗಬನ ರೋಡ್ ಇಲ್ಲಿರುವ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಂಜೆ 5-00 ಗಂಟೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ಕಿನ್ನಿಗೋಳಿಯ ಶೋಭಿತಾ ಭಟ್ ಇವರ ಹಾಡುಗಾರಿಕೆಗೆ ಕಾರ್ಕಳದ ಮಹತೀ ಕೆ. ಇವರು ವಯೋಲಿನ್, ಸುರತ್ಕಲ್ಲಿನ ಸಂದೀಪ್ ರಾಮಮೂರ್ತಿ ಮೃದಂಗಂನಲ್ಲಿ ಹಾಗೂ ಸುರತ್ಕಲ್ಲಿನ ವಿದ್ವಾತ್ ರಾವ್ ಇವರು ತಂಬೂರದಲ್ಲಿ ಸಾಥ್ ನೀಡಲಿದ್ದಾರೆ. ವಿದುಷಿ ಪ್ರವೀತಾ ಅಶೋಕ್ ಇವರ ಶಿಷ್ಯೆ ಗಾರ್ಗಿದೇವಿ ಇವರಿಂದ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಚೆನ್ನೈಯ ಹಿರಿಯ ಹಾಡುಗಾರ ವಿದ್ವಾನ್ ಶ್ರೀಕಾಂತ್ ಗೋಪಾಲಕೃಷ್ಣನ್ ಇವರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

