ಮಡಿಕೇರಿ : ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ’ಯನ್ನು ರಾಷ್ಟ್ರಕವಿ ಕುವೆಂಪುರವರು ರಚಿಸಿದ್ದು, ನಾಡಗೀತೆಯ ಆಶಯಕ್ಕೆ ನೂರು ವರ್ಷ ತುಂಬಿದೆ. ಅದರ ನೆನಪಿಗಾಗಿ ಸಹಸ್ರಕಂಠದಲ್ಲಿ ನಾಡಗೀತೆಯನ್ನು ಹಾಡುವ ಕಾರ್ಯಕ್ರಮವನ್ನು ಮತ್ತು ರಾಷ್ಟ್ರಕವಿ ಕುವೆಂಪುರವರ 120ನೆಯ ಜನ್ಮ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಇಲಾಖೆ, ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಹಿರಿಯ ದರ್ಜೆ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ದಿನಾಂಕ 04 ಜನವರಿ 2025ರಂದು ಬೆಳಿಗ್ಗೆ ಗಂಟೆ 9-45ಕ್ಕೆ ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಮಂಜುಳಾ ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಪ್ಪ ಮತ್ತು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಇವರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ, ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಶಿಕಲಾ ಕೆ.ವಿ., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆರ್.ಪಿ. ಚಂದ್ರಶೇಖರ್, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಿ.ಡಿ. ಶಿವಶಂಕರ್, ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎನ್. ಜಗದೀಶ್ ಉಪಸ್ಥಿತರಿರುತ್ತಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ತಿಳಿಸಿದ್ದಾರೆ.