ಬೆಂಗಳೂರು : ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ದಿನಾಂಕ 09 ಆಗಸ್ಟ್ 2026ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆಯಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ, ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜೆ.ಕೆ. ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಿದರು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ. ಶ್ರೀನಿವಾಸ್ ಇವರ ಪ್ರಶಸ್ತಿ ಪ್ರದಾನ ಮಾಡಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ, ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘದ ಸಂಘಟನೆಯ ಒಕ್ಕೂಟ ಅಧ್ಯಕ್ಷರಾದ ಎಂ. ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದರು. ಕಾರ್ಯಕ್ರಮ ಸಂಯೋಜಕರಾದ ಎಸ್.ಆರ್. ವಿಜಯ ಸಮರ್ಥ ಸ್ವಾಗತಿಸಿ, ಶ್ರೀಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.
