ಮಂಗಳೂರು : ಗಿಳಿವಿಂಡು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ, ರಂಗ ಅಧ್ಯಯನ ಕೇಂದ್ರ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಮಂಗಳೂರು, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಮ್ಮಕ್ಕೆ ನೆಂಪು ಕೂಟ ಚಾರಿಟೇಬಲ್ ಟ್ರಸ್ಟ್ ಕುಡ್ಲ (ರಿ.) ಇವರ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ‘ನಾನು ಕಾರಂತ’ ಕನ್ನಡ ನಾಟಕ ಪ್ರದರ್ಶನವನ್ನು ದಿನಾಂಕ 19 ಜೂನ್ 2026ರಂದು ಸಂಜೆ ಗಂಟೆ 6-30ಕ್ಕೆ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಎಲ್.ಸಿ.ಆರ್.ಐ ಬ್ಲಾಕ್ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 4ನೇ ಪ್ರದರ್ಶನ ಕಾಣುತ್ತಿರುವ ಈ ನಾಟಕವನ್ನು ಜಗನ್ ಪವಾರ್ ನಿರ್ದೇಶನ ಮಾಡಿದ್ದಾರೆ.

