ಕೋಟ : ಕಾರ್ಕಳದಲ್ಲಿ ಸಾಹಿತ್ಯ ಸಂಘವನ್ನು ಸ್ಥಾಪಿಸಿ ನಾಡಿನ ಪ್ರಸಿದ್ಧ ಸಾಹಿತಿಗಳನ್ನು ಕಾರ್ಕಳಕ್ಕೆ ಕರೆತಂದ ಹಿರಿಮೆಯನ್ನು ಹೊಂದಿರುವ ಎಂ. ರಾಮಚಂದ್ರರವರ ಸವಿನೆನಪಿನಲ್ಲಿ ನೀಡುವ ಪ್ರಶಸ್ತಿಗೆ ಸಾಹಿತ್ಯ ಸಂಘಟಕರಾಗಿರುವ ಶಿಕ್ಷಕ ನರೇಂದ್ರ ಕುಮಾರ್ ಕೋಟ ಆಯ್ಕೆ ಮಾಡಲಾಗಿದೆ.
ಪ್ರೊ. ಎಂ. ರಾಮಚಂದ್ರ ಇವರ ಮಡದಿ ಶಾರದಾ ರಾಮಚಂದ್ರ ಮತ್ತು ಮಕ್ಕಳು ಕನ್ನಡ ನಾಡು – ನುಡಿಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಓರ್ವರಿಗೆ ಪ್ರತಿ ವರ್ಷವೂ ಪ್ರಶಸ್ತಿಯನ್ನು ನೀಡುತ್ತಾ ಬರುತ್ತಿದ್ದು, ಈ ವರ್ಷದ ಪ್ರಶಸ್ತಿಗೆ ನರೇಂದ್ರ ಕುಮಾರ್ ಇವರನ್ನು ಆಯ್ಕೆ ಮಾಡಲಾಗಿದೆ. ಈ ಸಾಲಿನ ಎಂ. ರಾಮಚಂದ್ರ ಸಂಸ್ಮರಣಾ ಪ್ರಶಸ್ತಿಯನ್ನು ದಿನಾಂಕ 05 ಜೂನ್ 2025ರಂದು ಕಾರ್ಕಳದ ಪ್ರಕಾಶ್ ಹೋಟೆಲಿನ ಸಂಭ್ರಮ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದೆಂದು ಸಾಹಿತ್ಯ ಸಂಘ ಕಾರ್ಕಳ ತಿಳಿಸಿದೆ.