ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆಯು ಪ್ರಸ್ತುತ ಪಡಿಸುವ ‘ನಾಟ್ಯ ಚಾರಿ’ ವಿದುಷಿ ಅಯನ ಪೆರ್ಲ ಇವರಿಂದ ಭರತನಾಟ್ಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯನ್ನು ದಿನಾಂಕ 04 ಏಪ್ರಿಲ್ 2025ರಂದು ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುರಳೀಧರ ಶೆಟ್ಟಿ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಧರ್ಮದರ್ಶಿ ಹರಿಕೃಷ್ಣ ಪುನರೂರು ಮತ್ತು ವಿದುಷಿ ಶಾರದಾಮಣಿ ಶೇಖರ್ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.