ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯ ಸರಣಿ-ಮಾಲಿಕೆ 28ರ ‘ನಾಟ್ಯಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 31 ಜುಲೈ 2026ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾ. ಶ್ರೇಯ ವಿಕ್ರಾಂತ್ ಕುಮಾರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಾಟ್ಯನಿಕೇತನ ಹಿರಿಯ ವಿದ್ಯಾರ್ಥಿನಿಯರಾದ ವಿದುಷಿ ಮಯೂರಿ ಅತ್ತಾವರ ಮತ್ತು ವಿದುಷಿ ಶ್ರುತಿ ಚಂದ್ರು ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

