ಬೆಂಗಳೂರು : ಜಾಗೃತಿ ಟ್ರಸ್ಟ್ (ರಿ.) ಬೆಂಗಳೂರು ಇದರ ವತಿಯಿಂದ ಹಾಗೂ ಕನ್ನಡ ಮಟ್ಟಿ ಸಂಸ್ಕೃತಿ ಇಲಾಖೆ ಇವರ ಸಹಕಾರದೊಂದಿಗೆ ‘ನವದುರ್ಗಾ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ, ಕವಿಗೋಷ್ಠಿ ಮತ್ತು ಪ್ರಶಸ್ತಿ ವಿತರಣೆ ಸಮಾರಂಭವನ್ನು ದಿನಾಂಕ 26 ಸೆಪ್ಟೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9-30 ಗಂಟೆಗೆ ಇಂಡಿಯನ್ ಪ್ರೈಮರಿ ಹಾಗೂ ಹೈಸ್ಕೂಲ್ ಮಕ್ಕಳಿಂದ ಭಕ್ತಿಗೀತೆ ಮತ್ತು ನವದುರ್ಗಾ ನೃತ್ಯ ಪ್ರದರ್ಶನಗೊಳ್ಳಲಿದ್ದು, ಕರ್ಣಾಟಕ ಗಡಿನಾಡು ಅಭಿವೃದ್ಧಿ ಪ್ರಾಧಿಕಾರ ಇದರ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಾಹಿತಿಗಳಾದ ಡಾ. ಕೆ.ಜಿ. ಲಕ್ಷ್ಮೀನಾರಾಯಣ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ‘ಕಿತ್ತೂರು ರಾಣಿ ಚೆನ್ನಮ್ಮ ಸೇವಾರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.