Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ‘ಸಾಹಿತ್ಯ ವೈಭವ 2026’ | ಜನವರಿ 25

    January 23, 2026

    ವಿಜಯಪುರ ಜಿಲ್ಲಾ ಸಮಿತಿಯಿಂದ ಗಮಕ ವಾಚನ ಮತ್ತು ವ್ಯಾಖ್ಯಾನ

    January 23, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಕಣ್ಣಂಚಿನ ತಾರೆ’ ಕಥಾ ಸಂಕಲನ

    January 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ನಿಂಗೋಲ್ ಚಕೋಬಾ ಆಚರಣೆ – 2024’
    Cultural

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ನಿಂಗೋಲ್ ಚಕೋಬಾ ಆಚರಣೆ – 2024’

    December 2, 2024Updated:January 7, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ `ನಿಂಗೋಲ್ ಚಕೊಬಾ’ ಆಚರಣೆಯು ದಿನಾಂಕ 01 ಡಿಸೆಂಬರ್ 2024ರ ಭಾನುವಾರ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ  ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ “2 ಸಾವಿರ ವರ್ಷಗಳ ಇತಿಹಾಸವಿರುವ ಮೈತೇಯಿ ಸಂಸ್ಕೃತಿ ಇಂದಿಗೂ ಶ್ರೀಮಂತವಾಗಿ ಉಳಿದಿರುವುದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು. ಸಹೋದರ ಸಹೋದರಿಯರ ನಡುವೆ ಇರುವ ಭ್ರಾತೃತ್ವ ಮತ್ತು ರಕ್ಷಣಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ನಿಂಗೋಲ್ ಚಕೋಬಾ’. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಎಲ್ಲಾ ಸಂಪ್ರದಾಯ, ಆಚರಣೆ, ಭಾಷೆ, ಆಹಾರ ಪದ್ಧತಿ, ನಂಬಿಕೆಗಳು ಮತ್ತು ಸಂಸ್ಕೃತಿಯನ್ನು ಗೌರವಿಸಿ, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮೈತೇಯಿ ಸಂಸ್ಕೃತಿಯುಳ್ಳ ಆಚರಣೆ ಮಾಡುವುದರೊಂದಿಗೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಣಿಪುರದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಆಯ್ದ 10 ಕುಟುಂಬಗಳಿಗೆ ಅದರಲ್ಲೂ ವಿಶೇಷವಾಗಿ ಅನಾಥ ನಿರಾಶ್ರಿತ ಕುಟುಂಬಗಳಿಗೆ ತಲಾ 10 ಸಾವಿರ ಸಹಾಯಧನದಂತೆ ಒಂದು ಲಕ್ಷ ರೂಪಾಯಿಯನ್ನು ನೀಡಲಾಗುವುದು. ಈ ಮಹತ್ ಕಾರ್ಯಕ್ಕೆ ಮಣಿಪುರದ ಮಾಜಿ ಸಚಿವ ಡಾ. ನಾರಾ ಸಿಂಗ್,  ಅಂತಹ ಕುಟುಂಬಗಳನ್ನು ಪತ್ತೆ ಹಚ್ಚಲು ಹಾಗೂ ಸಹಾಯಧನ ಸರಿಯಾದ ಕುಟುಂಬಕ್ಕೆ ತಲುಪುವಂತೆ ಮಾಡಲು ಸಕಕರಿಸಲಿದ್ದಾರೆ.” ಎಂದರು.
    ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಸಂಸ್ಥೆಯ ಹೆಮ್ಮೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಬಳಿಕ ಮಣಿಪುರಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲೀಲಾಧರ್ ಕರ್ಕೇರ ಮತ್ತು ಸುಶ್ಮಿತಾ ಅವರ ಮಾರ್ಗದರ್ಶನದಲ್ಲಿ ಮಣಿಪುರಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಹೆಮ್ಮೆಯ ಜಾನಪದ ಕಲೆ ವೀರಗಾಸೆ ಕುಣಿತ ತರಬೇತಿ ನೀಡಿ ವಿಶೇಷವಾಗಿ ಪ್ರದರ್ಶನ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
    ಕಾರ್ಯಕ್ರಮದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಡಾ. ವನಿತಾ ಶೆಟ್ಟಿ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಯತಿಕುಮಾರ್, ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ ಉಪಸ್ಥಿತರಿದ್ದರು. ಕಾರ್ಯಕ್ರವನ್ನು ವಿದ್ಯಾರ್ಥಿ ಎಲ್. ಶ್ರೀನಿವಾಸ್ ನಿರೂಪಿಸಿ, ನರೇಶ್ ಮೈಬಮ್ ಸ್ವಾಗತಿಸಿ, ವಂದಿಸಿದರು.
    ಮಣಿಪುರಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ವಿದ್ಯಾರ್ಥಿಗಳು ತಯಾರಿಸಿದ ಮಣಿಪುರಿಯ ರುಚಿಕರವಾದ ಸಾಂಪ್ರದಾಯಿಕ ಖಾದ್ಯಗಳಾದ ಇರೊಂಬಾ, ಓಟಿ, ಎಂಗ್ ತೊಂಬಾ, ಮಣಿಪುರಿ ಖೀರ್ , ಚಂಪೂಟ್ ಮತ್ತು ಕಾಂಘೌವನ್ನು ಹಬ್ಬದಲ್ಲಿ ಉಣ ಬಡಿಸಲಾಯಿತು. ಬಳಿಕ, ಎಲ್ಲಾ ಮಣಿಪುರಿಯ ಹೊಸ ವಿದ್ಯಾರ್ಥಿನಿಯರಿಗೆ ತಮ್ಮ ಸಹೋದರರ ಕಡೆಯಿಂದ ಉಡುಗೊರೆಯನ್ನು ನೀಡಿ ಶುಭಾಶಯ ತಿಳಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕುದುರೆಮುಖ ಕನ್ನಡ ಸಂಘದ 69ನೇ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ
    Next Article ವಿಜಯಪುರದಲ್ಲಿ ಸಂಭ್ರಮದ ಕನಕ ಜಯಂತಿ
    roovari

    Add Comment Cancel Reply


    Related Posts

    ಬಾಗಲಕೋಟೆಯಲ್ಲಿ ‘ಅಖಿಲ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ’ | ಜನವರಿ 25

    January 23, 2026

    ‘ಕಥಾಬಿಂದು ಸಾಹಿತ್ಯ ಸಂಭ್ರಮ’ದಲ್ಲಿ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಲೋಕಾರ್ಪಣೆ

    January 22, 2026

    ಕಾಸರಗೋಡು ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ‘ರಜತ ಸಂಭ್ರಮ’

    January 21, 2026

    ಹಿಟ್ಟಿನಹಳ್ಳಿಯಲ್ಲಿ ವಿಜಯಪುರ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 20 ಮತ್ತು 21

    January 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.