ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಮತ್ತು ರಥಬೀದಿ ಗೆಳೆಯರು (ರಿ.) ಉಡುಪಿ ಇದರ ವತಿಯಿಂದ ‘ನಿರಂಜನರ ನೂರರ ನೆನಪು’ ಕಾರ್ಯಕ್ರಮವನ್ನು ದಿನಾಂಕ 27 ಜುಲೈ 2025ರಂದು ಬೆಳಿಗ್ಗೆ 09-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್. ಮುಕುಂದ ರಾಜ್ ಇವರು ಅಧ್ಯಕ್ಷತೆ ವಹಿಸಲಿರುವರು. 11-45 ಗಂಟೆಗೆ ವಿಚಾರಗೋಷ್ಠಿ 01ರಲ್ಲಿ ‘ಪ್ರಗತಿಶೀಲ ಸಾಹಿತ್ಯದ ಹಿನ್ನೆಲೆಯಲ್ಲಿ ನಿರಂಜನರ ಬರಹಗಳು’ ಎಂಬ ವಿಷಯದ ಬಗ್ಗೆ ಹಿರಿಯ ಸಾಹಿತಿ ಡಾ. ಕೆ. ಕೇಶವ ಶರ್ಮ ಇವರು ವಿಚಾರ ಮಂಡನೆ ಹಾಗೂ ಬರಹಗಾರ ನವೀನ್ ಕುಮಾರ್ ಹಾಸನ ಇವರು ಪ್ರತಿ ಸ್ಪಂದನೆ ಮಾಡಲಿದ್ದಾರೆ. ಮಧ್ಯಾಹ್ನ 1-00 ಗಂಟೆಗೆ ನಡೆಯಲಿರುವ ವಿಚಾರಗೋಷ್ಠಿ 02ರಲ್ಲಿ ‘ನಿರಂಜನರ ಕಿರಿಯರ ವಿಶ್ವಕೋಶ ಮತ್ತು ವಿಶ್ವ ಕಥಾಕೋಶದ ಕಾಯಕ’ ಎಂಬ ವಿಷಯದ ಬಗ್ಗೆ ಸಾಹಿತಿ ಡಾ. ವರದರಾಜ ಚಂದ್ರಗಿರಿ ಇವರು ವಿಚಾರ ಮಂಡನೆ ಹಾಗೂ 3-00 ಗಂಟೆಗೆ ನಿರಂಜನರ ಕುರಿತ ಸಾಕ್ಷ ಚಿತ್ರ ಪ್ರದರ್ಶನಗೊಳ್ಳಲಿದೆ. ಸಂಜೆ 3-30 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಥಬೀದಿ ಗೆಳೆಯರು ಇದರ ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್ ವಹಿಸಲಿದ್ದು, ವಿಶ್ರಾಂತ ಉಪಕುಲಪತಿಗಳಾದ ಡಾ. ಸಬಿಹಾ ಭೂಮಿಗೌಡ ಇವರು ಸಮಾರೋಪ ಭಾಷಣ ಮಾಡಲಿದ್ದಾರೆ.