ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವು ದಿನಾಂಕ 21 ಡಿಸೆಂಬರ್ 2024ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಡೆಯಲಿದೆ. ಈ ಸಂಭ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷರಾದ ಜೆ. ಲೋಕೇಶ್ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿರುವರು.
ಪ್ರಮೋದ್ ಶಿಗ್ಗಾಂವ್ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಡ್ಯದ ಕರ್ನಾಟಕ ಸಂಘ (ರಿ.) ಅಭಿನಯಿಸುವ ಕೆ.ವಿ. ಶಂಕರೇಗೌಡರ ಜೀವನಾಧಾರಿತ ನಾಟಕ ‘ನಿತ್ಯಸಚಿವ’ ಪ್ರದರ್ಶನಗೊಳ್ಳಲಿದೆ.