ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಮುಷ್ಟಿ ಪ್ರಜ್ಞೆಯ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಹಲವು ಪ್ರಮುಖ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ, ಸಾಮಾಜಿಕ ಸೇವೆಯಲ್ಲಿಯೂ ನಿರತರಾಗಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಾ ಬಂದಿರುವ, ಪ್ರತಿ ವರ್ಷವೂ ನಿಯತವಾಗಿ ಕನ್ನಡ ದಿನಚರಿಯನ್ನು ಹೊರತರುತ್ತಾ ಕನ್ನಡ ಸೇವೆಯಲ್ಲಿ ನಿರತರಾಗಿರುವ ಕಲಬುರಗಿಯ ಸೈಯ್ಯದ ನಜೀರೊದ್ದಿನ ಮುತವಲ್ಲಿ ಇವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ 9 (3)ರಲ್ಲಿ ಮಾನ್ಯ ಅಧ್ಯಕ್ಷರಿಗೆ ದತ್ತವಾಗಿರುವ ಅಧಿಕಾರದನ್ವಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಗೆ ನಾಮ ನಿರ್ದೇಶನ ಮಾಡಿದ್ದಾರೆ.
ಸೈಯ್ಯದ ನಜೀರೊದ್ದಿನ ಮುತವಲ್ಲಿ ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದಾರೆ, ಸಂಘ ಸಂಸ್ಥೆಗಳ ಜೊತೆಗೆ ನಿಕಟವಾದ ಒಡನಾಟ ಹೊಂದಿದ್ದಾರೆ. ಅವರ ಕನ್ನಡ ಪ್ರೇಮ ಮತ್ತು ನಾಡಿನ ಕುರಿತು ಅಭಿಮಾನ ಕನ್ನಡ ಸಾಹಿತ್ಯ ಪರಿಷತ್ತಿಗೆ ಇನ್ನಷ್ಟು ಕ್ರಿಯಾತ್ಮಕತೆಯನ್ನು ತರಲಿದೆ ಎಂದು ನಾಡೋಜ ಡಾ.ಮಹೇಶ ಜೋಶಿಯವರು ಆಶಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಸೈಯ್ಯದ ನಜೀರೊದ್ದಿನ ಮುತವಲ್ಲಿ ನಾಮ ನಿರ್ದೇಶನ
No Comments1 Min Read
Previous Articleಕಾಸರಗೋಡಿನಲ್ಲಿ “ಗುರುದಕ್ಷಿಣೆ” ಯಕ್ಷಗಾನ ತಾಳಮದ್ದಳೆ